ಕೋಟ ಮೇಲೆ ಸಿಎಂ ಆರೋಪ: ಹೆಬ್ಬಾಳ್ಕರ್ ಸಮರ್ಥನೆಸದನದಲ್ಲಿ ಮುಖ್ಯಮಂತ್ರಿ ಶ್ರೀನಿವಾಸ ಪೂಜಾರಿ ಅವರ ಹೆಸರು ಹೇಳಿದ್ದಾರೆ, ಸುಮ್ಮನೆ ರಾಜಕೀಯಕ್ಕಾಗಿ ಆರೋಪ ಮಾಡುವ ಜಾಯಮಾನದವರು ಸಿದ್ದರಾಮಯ್ಯ ಅಲ್ಲ, ಅವರು ಜವಾಬ್ದಾರಿ ಸ್ಥಾನದಲ್ಲಿದ್ದಾರೆ, 15 ಬಾರಿ ಬಜೆಟ್ ಮಂಡಿಸಿದ್ದಾರೆ, ಅವರು ಪಕ್ಕಾ ಮಾಹಿತಿ ಇದ್ದರೆ ಮಾತ್ರ ಆರೋಪ ಮಾಡುತ್ತಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ.