ಉಡುಪಿ, ದ.ಕ. ಜಿಲ್ಲೆಯಾದ್ಯಂತ ಸಂಭ್ರಮದ ಕ್ರಿಸ್ಮಸ್ಕ್ರಿಸ್ಮಸ್ ಪ್ರಯುಕ್ತ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಎಲ್ಲ ಚರ್ಚ್ಗಳಲ್ಲಿ ವಿಶೇಷ ಬಲಿಪೂಜೆ, ಪ್ರಾರ್ಥನೆ ನೆರವೇರಿತು. ಭಾನುವಾರ ರಾತ್ರಿ ಬಲಿಪೂಜೆಗಳಲ್ಲಿ ಭಾಗವಹಿಸಲು ಸಾಧ್ಯವಾಗದೆ ಇದ್ದವರು ಸೋಮವಾರ ನಡೆದ ವಿಶೇಷ ಬಲಿಪೂಜೆಯಲ್ಲಿ ಭಾಗವಹಿಸಿದರು. ಗೋದಲಿ, ಪ್ರಾರ್ಥನೆ, ಕೇಕ್ ವಿನಿಮಯ ಹಬ್ಬದ ಸಂಭ್ರಮ ಹೆಚ್ಚಿಸಿತು.