ಮಾನವ ಕಳ್ಳಸಾಗಾಣೆ ತಡೆಗೆ ಅಧಿಕಾರಿಗಳು ಕಟ್ಟುನಿಟ್ಟಾಗಿ ಕಾನೂನು ಪಾಲಿಸಿ: ನ್ಯಾ. ಶರ್ಮಿಳಾಉಡುಪಿಯ ಬ್ರಹ್ಮಗಿರಿಯ ಜಿಲ್ಲಾ ಬಾಲಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಗಳ ಸಂಯುಕ್ತ ಆಶ್ರಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ ಕ್ಷೇತ್ರ ಮಟ್ಟದ ವಿವಿಧ ಇಲಾಖೆಯ ಭಾಗೀದಾರರಿಗೆ ಜಿಲ್ಲಾಮಟ್ಟದಲ್ಲಿ ತರಬೇತಿ ಕಾರ್ಯಕ್ರಮ ನಡೆಯಿತು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್. ಕಾರ್ಯಕ್ರಮ ಉದ್ಘಾಟಿಸಿದರು.