ಮಣಿಪಾಲ: ತಬ್ಬಲಿ ಗಂಡು ಕರುವಿಗೆ ನಾಮಕರಣ, ತೊಟ್ಟಿಲು ಶಾಸ್ತ್ರ!ಶಿವರಾತ್ರಿಯಂದು ರಾತ್ರಿ, ಮಣಿಪಾಲದ ಟೈಗರ್ ಸರ್ಕಲ್ನಲ್ಲಿ ಹಣೆಯ ಮೇಲೆ ಬಿಳಿ ಮಚ್ಚೆಯನ್ನು ಹೊಂದಿರುವ ಈ ಗಂಡು ಕರು ಪತ್ತೆಯಾದ್ದರಿಂದ ಅದಕ್ಕೆ ಟೈಗರ್ ಶಿವ ಎಂಬ ಹೆಸರಿಡಲಾಯಿತು. ಸಮಾಜಸೇವಕ ನಿತ್ಯಾನಂದ ಒಳಕಾಡು, ಬೀದಿ ಬದಿಯಲ್ಲಿದ್ದ ಕರುವನ್ನು ರಕ್ಷಿಸಿದ್ದು, ಅದಕ್ಕೆ ಬುಧವಾರ ಸಂಜೆ ಗೋಧೂಳಿ ವೇಳೆಯಲ್ಲಿ ಮನುಷ್ಯರಂತೆ ತೊಟ್ಟಿಲು ಶಾಸ್ತ್ರ, ನಾಮಕರಣದ ಶಾಸ್ತ್ರವನ್ನು ನಡೆಸಿದರು.