• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • udupi

udupi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ ಜಿಲ್ಲೆ ಶಿಕ್ಷಣದಲ್ಲಿ ಪ್ರಥಮ ಸ್ಥಾನ ಪಡೆಯಬೇಕು: ಯಶ್ಪಾಲ್ ಸುವರ್ಣ
ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಉಡುಪಿ ಇದರ ಸಭಾಂಗಣದಲ್ಲಿ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಹಾಗೂ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಪರೀಕ್ಷಾ ಪೂರ್ವ ತಯಾರಿ ಸಭೆ ನಡೆಯಿತು.
ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಗರಣ ಸಿಐಡಿಗೆ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ಪಕ್ಷದ ಸ್ಥಳೀಯ ಕಾರ್ಯಕರ್ತರು ಈ ಅವ್ಯವಹಾರದ ಬಗ್ಗೆ ತೀವ್ರ ಹೋರಾಟಗಳನ್ನು ನಡೆಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. ಆದರೆ ಯಾವುದೇ ಪ್ರಯೋಜನವಾಗಿರಲಿಲ್ಲ.
ಸಬ್‌ ರಿಜಿಸ್ಟ್ರಾರ್‌ ಕಚೇರಿಯಲ್ಲಿ ಅವ್ಯವಹಾರ ಪತ್ತೆಯಾಗಿಲ್ಲ
ದೂರು ಬಂದ ಹಿನ್ನೆಲೆಯಲ್ಲಿ ಹಿನ್ನಲೆ ಉಪಲೋಕಾಯುಕ್ತರು ಉಡುಪಿ ನೋಂದಣಿ ಕಚೇರಿಯ ತನಿಖೆಗೆ ಸರ್ಚ್ ವಾರೆಂಟ್ ಅನ್ನು ಹೊರಡಿಸಿ ತನಿಖೆಗೆ ಮಂಗಳೂರು ವಿಭಾಗ ಲೋಕಾಯುಕ್ತ ಎಸ್.ಪಿ ಗೆ ಆದೇಶಿಸಿದ್ದರು. ಅದರಂತೆ ಬುಧವಾರ ಮಂಗಳೂರಿನ ಲೋಕಾಯುಕ್ತ ಪೋಲಿಸ್ ವರಿಷ್ಠಾಧಿಕಾರಿ ನೇತೃತ್ವದ ತಂಡ ಉಡುಪಿ ನೋಂದಣಿ ಕಚೇರಿಗೆ ಭೇಟಿ ನೀಡಿ ತನಿಖೆ ಕೈಗೊಂಡು ಪರಿಶೀಲಿಸಿದರು. ಆದರೇ ಈ ಸಂದರ್ಭದಲ್ಲಿ ಯಾವುದೇ ಅವ್ಯವಹಾರಗಳು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ
ಅಯೋಧ್ಯೆ ರಾಮನಿಗೆ ಕಾಶಿ ಮಠಾಧೀಶರಿಂದ ರಜತ ಪಲ್ಲಕಿ
ಬುಧವಾರ ಶ್ರೀ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ಮಾರ್ಗದರ್ಶನದಲ್ಲಿ ಅಯೋಧ್ಯೆಯ ಬಾಲರಾಮನಿಗೆ ರಜತ ಪಲ್ಲಕ್ಕಿ ಮತ್ತು ಕಾಷ್ಠ ತೊಟ್ಟಿಲುಗಳನ್ನು ಸಮರ್ಪಿಸಲಾಯಿತು. ಶ್ರೀ ಕಾಶೀ ಮಠಾಧೀಶರು ಕೊಡುಗೆ ನೀಡಿರುವ ಈ ಬೆಳ್ಳಿಯ ಪಲ್ಲಕ್ಕಿಯನ್ನು ಉಡುಪಿಯ ಪ್ರಸಿದ್ಧ ಸ್ವರ್ಣ ಜ್ಯುವೆಲ್ಲರ್ಸ್ ನಲ್ಲಿ ನಿರ್ಮಿಸಲಾಗಿದೆ. ಕಾಷ್ಠ ತೊಟ್ಟಿಲನ್ನು ರಾಜಸ್ಥಾನದಲ್ಲಿ ನಿರ್ಮಿಸಲಾಗಿದೆ.
ಮಣಿಪಾಲ ಕೆಎಂಸಿ: ಕ್ಯಾನ್ಸರ್ ಜಾಗೃತಿಗೆ ಕಲಾಕೃತಿ
ಶ್ರೀನಾಥ್ ಮಣಿಪಾಲ್ ಮತ್ತು ರವಿ ಹಿರೇಬೆಟ್ಟು ಅವರು ಮಣಿಪಾಲ ಕೆಎಂಸಿಯ ಸಮುದಾಯ ವೈದ್ಯಕೀಯ ವಿಭಾಗದ ವೈದ್ಯೆ ಡಾ. ರಂಜಿತಾ ಶೆಟ್ಟಿ ಮಾರ್ಗದರ್ಶನದಲ್ಲಿ ಆಸ್ಪತ್ರೆಯ ಇಂಟರಾಕ್ಟ್ ಆವರಣದಲ್ಲಿ ಜನಜಾಗೃತಿಗಾಗಿ ಬೃಹತ್ ಜಲವರ್ಣ ಕಲಾಕೃತಿ ರಚಿಸಿದರು. ವಿಶ್ವ ಕ್ಯಾನ್ಸರ್ ದಿನದ ಪ್ರಯುಕ್ತ ಈ ಮೂಲಕ ಜಾಗೃತಿ ಮೂಡಿಸಲಾಯಿತು.
ಸಂಸ್ಕೃತ ಸಂಸ್ಕೃತಿಯ ಬೇರು: ಪೂರ್ಣಿಮಾ ಶೆಟ್ಟಿ
ಉಡುಪಿ ಸಂಸ್ಕೃತ ಭಾರತಿ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಹತ್ತು ದಿನಗಳ ಉಚಿತ ಸಂಸ್ಕೃತ ಸಂಭಾಷಣ ಶಿಬಿರ ಸಂಪನ್ನಗೊಂಡಿತು. ಸಮಾರೋಪ ಸಮಾರಂಭದಲ್ಲಿ ಮಾನವ ಹಕ್ಕುಗಳು ಮತ್ತು ಮಹಿಳೆ ಮಕ್ಕಳ ಕಲ್ಯಾಣ ಸಂಘದ ರಾಜ್ಯ ಕಾರ್ಯದರ್ಶಿ ಪೂರ್ಣಿಮಾ ಶೆಟ್ಟಿ ಮಾತನಾಡಿ, ಸಂಸ್ಕೃತ ಭಾಷೆಯು ನಮ್ಮ ಸಂಸ್ಕೃತಿಯ ಬೇರಾಗಿದೆ. ಇದನ್ನು ಎಲ್ಲರೂ ಕಲಿಯಬೇಕು ಹಾಗೂ ಮಾತನಾಡಬೇಕು. ನಮಗೆ ಬಾಲ್ಯದಲ್ಲಿ ಸಂಸ್ಕೃತ ಕಲಿಯಲು ಅನುಕೂಲತೆ ಇರಲಿಲ್ಲ. ಈಗ ಸಂಸ್ಕೃತ ಭಾರತಿಯು ಜನ ಸಾಮಾನ್ಯರಿಗೆ ಸಂಭಾಷಣಾ ಶಿಬಿರಗಳ ಮುಖಾಂತರ ಉಚಿತವಾಗಿ ಸಂಸ್ಕೃತ ಕಲಿಸುವುದು ಅತ್ಯಂತ ಶ್ಲಾಘನೀಯ ಎಂದರು.
ವಿಶ್ವ ಕ್ಯಾನ್ಸರ್ ದಿನ : ಕಸ್ತೂರ್ಬಾ ಆಸ್ಪತ್ರೆಯಲ್ಲಿ ಮಾನವ ಸರಪಳಿಯ ಜಾಗೃತಿ ರಿಬ್ಬನ್
ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಮಾನವ ಸರಪಳಿಯ ಮೂಲಕ ಐಕಾನಿಕ್ ಕ್ಯಾನ್ಸರ್ ಜಾಗೃತಿ ರಿಬ್ಬನ್ ಅನ್ನು ರೂಪಿಸಿತು. ವೈದ್ಯರು, ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಸಿಬ್ಬಂದಿ ಕ್ಯಾನ್ಸರ್ ಸುತ್ತಲಿನ ಮೂಢನಂಬಿಕೆಗಳು ಮತ್ತು ತಪ್ಪುಗ್ರಹಿಕೆಗಳನ್ನು ಹೋಗಲಾಡಿಸುವ ಮತ್ತು ಕ್ಯಾನ್ಸರ್ ಕಾಯಿಲೆಯ ಚಿಹ್ನೆಗಳು, ಲಕ್ಷಣಗಳು ಮತ್ತು ಅಪಾಯಕಾರಿ ಅಂಶಗಳ ಬಗ್ಗೆ ಸಮುದಾಯಕ್ಕೆ ಶಿಕ್ಷಣ ನೀಡುವ ಗುರಿಯನ್ನು ಹೊಂದಿರುವ ವಿಶಿಷ್ಟ ಉಪಕ್ರಮದಲ್ಲಿ ಒಗ್ಗೂಡಿದರು.
ವಿಷದ ಬಾಟಲಿ ನುಂಗಿದ್ದ ನಾಗರಹಾವು ರಕ್ಷಣೆ
ಸುಮಿತ್ ಪೂಜಾರಿ ನೀರೆ ಎಂಬವರ ಮನೆಯಲ್ಲಿ ನಾಗರಹಾವು ವಿಷದ ಬಾಟಲಿ ನುಂಗಿದ ಘಟನೆ ನಡೆದಿದ್ದು, ನೀರೆ ಗ್ರಾಮದ ಜಗದೀಶ್ ಎಂಬವರು ಉಡುಪಿಯ ಉರಗ ತಜ್ಞ ಗುರುರಾಜ್ ಸನಿಲ್‌ಗೆ ಕರೆ ಮಾಡಿ ಮಾಹಿತಿ ನೀಡಿದರು. ಗುರುರಾಜ್ ಸನಿಲ್ ಅವರು ಗೆಳೆಯರೊಂದಿಗೆ ತೆರಳಿ ಹಾವನ್ನು ಹಿಡಿದು ವಿಷದ ಬಾಟಲಿಯನ್ನು ಹೊರ ತೆಗೆದು ರಕ್ಷಣೆ ಮಾಡಿದ್ದಾರೆ.
ಉಡುಪಿ ಪತ್ರಕರ್ತರ ಕ್ಷೇಮಾಭಿವೃದ್ಧಿಗೆ ಮಾಹೆ 5 ಲಕ್ಷ ರು. ದೇಣಿಗೆ
ಉಡುಪಿ ಜಿಲ್ಲಾ ಕಾರ್ಯನಿರತರ ಪತ್ರಕರ್ತ ಸಂಘದ ಸದಸ್ಯರಿಗೆ ಅನಾರೋಗ್ಯ, ಅಪಘಾತ ಸಹಿತ ಯಾವುದೇ ಅವಘಡ ಸಂಭವಿಸಿದಾಗ ನೆರವು ನೀಡಲು ಸ್ಥಾಪಿಸಲಾಗಿರುವ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಏಜ್ಯುಕೇಶನ್ (ಮಾಹೆ) 5 ಲಕ್ಷ ರು. ನೀಡಿದೆ.ಮಾಹೆ ಸಹಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಹಾಗೂ ಉಪಕುಲಪತಿ ಲೆ. ಜ. ಡಾ.ಎಂ.ಡಿ.ವೆಂಕಟೇಶ್ ಅವರು ಪತ್ರಕರ್ತರ ಸಂಘಕ್ಕೆ 5 ಲಕ್ಷ ರು.ಗಳ ಚೆಕ್ಕನ್ನು ಹಸ್ತಾಂತರಿಸಿದರು.
ಬ್ರಹ್ಮಾವರ ತಾಲೂಕು ಮಟ್ಟದ ಜನತಾ ದರ್ಶನ ಕಾರ್ಯಕ್ರಮ
ಬ್ರಹ್ಮಾವರ ತಾಲೂಕು ಜನತಾ ದರ್ಶನದಲ್ಲಿ ಕಾರ್ಯಕ್ರಮದಲ್ಲಿ 85 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಕಂದಾಯ ಇಲಾಖೆಗೆ 49, ಗ್ರಾಮೀಣ ಅಭಿವೃದ್ದಿ ಇಲಾಖೆಗೆ 22, ಶಿಕ್ಷಣ ಇಲಾಖೆ 1, ಗಣಿ ಇಲಾಖೆ 1, ಸಬ್ ರಿಜಿಸ್ಟಾರ್ 2, ಭೂಮಾಪಾನ ಇಲಾಖೆಗೆ 1, ಸಿಡಿಪಿಯು 3, ಮೆಸ್ಕಾಂ 1, ಲೋಕೋಪಯೋಗಿ ಇಲಾಖೆ 2, ಸಾರಿಗೆ ಇಲಾಖೆ 1 ಹಾಗೂ ಪೋಲಿಸ್ ಇಲಾಖೆಗೆ 1 ಅರ್ಜಿ ಬಂದಿರುತ್ತದೆ.
  • < previous
  • 1
  • ...
  • 394
  • 395
  • 396
  • 397
  • 398
  • 399
  • 400
  • 401
  • 402
  • ...
  • 435
  • next >
Top Stories
ಜು.14ಕ್ಕೆ ಸಿಗಂದೂರು ಸೇತುವೆ ಲೋಕಾರ್ಪಣೆ : ಸಿಗಂದೂರು ಚೌಡೇಶ್ವರಿ ಹೆಸರು
ರಣಮೇಘದ ಕಣ್ಣೀರು - ನಾನು ಟ್ರಂಪ್ ಆದೆನೆ?
ಕೊಡವ ಜನರಲ್ಲಿ ನಾನು ಮೊದಲ ಚಿತ್ರ ನಾಯಕಿ ಎಂದ ರಶ್ಮಿಕಾ : ಕೊಡಗಿನ ನಟಿಯರಿಂದ ತೀವ್ರ ‍ವಿರೋಧ
ಒಂದೇ ಕಾರಲ್ಲಿ ಯತ್ನಾಳ, ರಮೇಶ ರೌಂಡ್ಸ್‌ : ರಾಜಕೀಯ ಕುತೂಹಲ
ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಗೆ ಇನ್ನೂ ತೀರ್ಮಾನಿಸಿಲ್ಲ : ಮುಷ್ತಾಕ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved