ಭಯೋತ್ಪಾದನೆ ಧರ್ಮಾಧಾರಿತ ಎಂಬುದು ಸಾಬೀತು: ಕಿಶೋರ್ ಕುಮಾರ್ ಕುಂದಾಪುರಹಿಂದೂಗಳನ್ನು ಗುರಿಯಾಗಿಸಿ ದಾಳಿ ನಡೆಸಿರುವ ಉಗ್ರರು ಕೇವಲ ಧರ್ಮ ಕೇಳಿ ರಕ್ತದೋಕುಳಿ ಹರಿಸಿರುವುದು ಭಯೋತ್ಪಾದನೆ ಧರ್ಮಾಧಾರಿತ ಎಂಬುದನ್ನು ಜಗಜ್ಜಾಹೀರುಗೊಳಿಸಿದೆ. ಉಗ್ರರ ನಿರ್ಲಜ್ಜ, ಹೇಡಿತನದ ಪೈಶಾಚಿಕ ಕೃತ್ಯ ಸರ್ವತ್ರ ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಹೇಳಿದ್ದಾರೆ.