ಮಾರ್ಚ್ 15 ರಿಂದ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಜಾತ್ರಾ ಮಹೋತ್ಸವಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಜಾತ್ರಾ ಮಹೋತ್ಸವ ಮಾ.15 ರಂದು ಗಣಪತಿ ಪ್ರಾರ್ಥನೆಯೊಂದಿಗೆ ಧಾರ್ಮಿಕ ವಿಧಿಗಳು ಆರಂಭಗೊಳ್ಳಲಿದ್ದು, ಧ್ವಜಾರೋಹಣ, ಯಾಗ ಶಾಲೆ ಪ್ರವೇಶ, ಭೇರಿ ತಾಡನ, ಕೌತುಕ ಬಂಧನ ಹಾಗೂ ನಗರೋತ್ಸವ ನಡೆಯಲಿದೆ ಎಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಬಾಬು ಶೆಟ್ಟಿ ತಗ್ಗರ್ಸೆ ಹೇಳಿದ್ದಾರೆ.