ಬಿಜೆಪಿ ಕಾರ್ಯಕರ್ತರು ಜಾತಿ ನೋಡಿ ಮತದಾನ ಮಾಡಲ್ಲ: ಪ್ರಮೋದ್ ಮಧ್ವರಾಜ್ನಾನು ಹಿಂದೆ ಕ್ರೀಡಾಸಚಿವನಾಗಿದ್ದವ, ನನಗೆ ಬಿಜೆಪಿ ಟಿಕೆಟ್ ಸಿಕ್ಕಿಲ್ಲ ಎನ್ನುವುದನ್ನು ಕ್ರೀಡಾ ಮನೋಭಾವದಿಂದ ಸ್ವೀಕರಿಸಿದ್ದೇನೆ. ಬಿಜೆಪಿ ನನ್ನನ್ನು ಗುರುತಿಸಿದೆ, ಅದಕ್ಕೆ ಉಡುಪಿ ಚಿಕ್ಕಮಗಳೂ ಕ್ಷೇತ್ರ ಚುನಾವಣಾ ಪ್ರಚಾರದ ಜವಾಬ್ದಾರಿ ನೀಡಿದೆ. ನನ್ನ ಕೊನೆಯ ಉಸಿರುವವರೆಗೆ ಬಿಜೆಪಿಯಲ್ಲಿಯೇ ಇರುತ್ತೇನೆ, ಕಾಂಗ್ರೆಸ್ ವಿರುದ್ಧ ಬಿಜೆಪಿಯನ್ನು ಗೆಲ್ಲಿಸಲು ಕೆಲಸ ಮಾಡುತ್ತೇನೆ ಎಂದು ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.