ಉಡುಪಿ: ಜಿಲ್ಲೆಯ 203 ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವದ ಭೀತಿಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಒದಗಿಸಲು ಸರ್ಕಾರಿ ಹಾಗೂ ಖಾಸಗಿ ಒಡೆತನದ 70 ಕೊಳವೆ ಬಾವಿಗಳನ್ನು ಹಾಗೂ 25 ಬಾವಿಗಳನ್ನು ಗುರುತಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಅಭಾವ ಉಂಟಾದಲ್ಲಿ ಖಾಸಗಿ ಬೋರ್‌ವೆಲ್, ಬಾವಿ ಗುರುತಿಸಿ, ಅವುಗಳನ್ನು ಬಾಡಿಗೆಗೆ ತೆಗೆದುಕೊಂಡು ನೀರು ಒದಗಿಸಲಾಗುತ್ತದೆ.