ಉಡುಪಿ: ಎಸ್ಡಿಪಿಐ ರಾಷ್ಟ್ರೀಯ ಅಧ್ಯಕ್ಷರ ಬಂಧನ ವಿರೋಧಿಸಿ ಪ್ರತಿಭಟನೆಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಅಧ್ಯಕ್ಷ ಎಂ.ಕೈ ಫೈಝಿ ಅವರನ್ನು ಜಾರಿ ನಿರ್ದೇಶನಾಲಯವು ಅಕ್ರಮವಾಗಿ ಬಂಧಿಸಿರುವುದರ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಯ ಅಂಗವಾಗಿ ಎಸ್ಡಿಪಿಐ ಉಡುಪಿ ಜಿಲ್ಲಾ ಘಟಕದ ವತಿಯಿಂದ ನಗರದ ಅಜ್ಜರಕಾಡು ಹುತಾತ್ಮರ ಸ್ಮಾರಕ, ಉಚ್ಚಿಲ ಪೇಟೆ ಹಾಗೂ ಗಂಗೊಳ್ಳಿಯ ಜಾಮಿಯಾ ಮೊಹಲ್ಲಾದಲ್ಲಿ ಮಂಗಳವಾರ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಯಿತು.