ಸಕ್ಕರೆ ಕಾರ್ಖಾನೆ ಸ್ಕ್ರಾಪ್ ಅವ್ಯವಹಾರ ಸಾಬೀತು: 13.92 ಕೋಟಿ ರು. ನಷ್ಟ!ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಹಳೆಯ ಯಂತ್ರೋಪಕರಣಗಳ ಮಾರಾಟದಲ್ಲಿ ಒಟ್ಟು 13.92 ಕೋಟಿ ರು. ನಷ್ಟ ಉಂಟಾಗಿರುವುದು ತನಿಖೆಯಲ್ಲಿ ದೃಢಪಟ್ಟಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.