ಹಾಸ್ಟೆಲ್ ಗೋಡೆ ಮೇಲೆ ದೇಶದ್ರೋಹಿ ಬರಹ ಬರೆದಆರೋಪಿ ಬಂಧಿಸಲು ಪೊಲೀಸರು ವಿಫಲ: ಬಿಜೆಪಿ ಆಕ್ರೋಶಹಾಸ್ಟೆಲ್ ಎಂದ ಮೇಲೆ ನಿರ್ದಿಷ್ಟ ಸಂಖ್ಯೆಯ ವಿದ್ಯಾರ್ಥಿಗಳಿರುತ್ತಾರೆ. ಹಾಸ್ಟೆಲ್ ಆವರಣ, ಸಿಸಿ ಕ್ಯಾಮರಾ ಕಣ್ಗಾವಲು ಇರುವ ಸ್ಥಳ, ಎಲ್ಲ ವಿದ್ಯಾರ್ಥಿಗಳ ಸಂಪೂರ್ಣ ಮಾಹಿತಿಯೂ ದಾಖಲಾಗಿರುತ್ತದೆ. ಪ್ರಕರಣದ ಜಾಡು ಹಿಡಿಯಲು ಇಷ್ಟೆಲ್ಲ ವ್ಯವಸ್ಥೆಗಳಿದ್ದರೂ, ಪ್ರಕರಣ ಭೇದಿಸಲು ಪೊಲೀಸ್ ಇಲಾಖೆ ವಿಫಲವಾಗಲು ಕಾರಣವೇನು? ಪೊಲೀಸ್ ಇಲಾಖೆಯನ್ನು ಒತ್ತಡಕ್ಕೆ ಸಿಲುಕಿಸಲಾಯಿತೇ? ಎಂದು ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಪ್ರಶ್ನಿಸಿದ್ದಾರೆ.