ಹವ್ಯಾಸಿ ರಂಗಕರ್ಮಿ ಡಾ. ಭಾಸ್ಕರಾನಂದ ಕುಮಾರ್ಗೆ ರಂಗಭೂಮಿ ಪ್ರಶಸ್ತಿ ಪ್ರದಾನರಂಗಭೂಮಿ ಉಡುಪಿ ವತಿಯಿಂದ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆಯುತ್ತಿರುವ ಮೂರು ದಿನಗಳ ರಂಗಭೂಮಿ ರಂಗೋತ್ಸವದ 2ನೇ ದಿನ ಭಾನುವಾರ ಪ್ರಸಿದ್ಧ ವೈದ್ಯ ಡಾ. ಭಾಸ್ಕರಾನಂದ ಕುಮಾರ್ ಅವರು ಸಾಮಾಜಿಕ, ವೈದ್ಯಕೀಯ, ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಕ್ಕೆ ನೀಡಿರುವ ಅನನ್ಯ ಕೊಡುಗೆಗಾಗಿ ‘೨೦೨೫ನೇ ಸಾಲಿನ ರಂಗಭೂಮಿ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.