ದೇಶದಲ್ಲಿ ಸನಾತನ ಬೋರ್ಡ್ ಸ್ಥಾಪನೆಗೆ ಪೇಜಾವರ ಶ್ರೀ ಒತ್ತಾಯಅನೇಕ ದೇವಾಲಯಗಳು ಸರ್ಕಾರದ ಕಪಿಮುಷ್ಠಿಯಲ್ಲಿದೆ. ಅವುಗಳ ಜೀರ್ಣೋದ್ಧಾರ ಆಗುತ್ತಿಲ್ಲ, ಪರಿಚಾರಕ ವರ್ಗಕ್ಕೆ ಸೂಕ್ತ ಸಂಭಾವನೆ ಸಿಗುತ್ತಿಲ್ಲ, ಭಕ್ತರು ನೀಡುವ ಕಾಣಿಕೆ ಸಧ್ವಿನಿಯೋಗ ಆಗುತ್ತಿಲ್ಲ ಎಂದು ಬೇಸರಿಸಿದ ಶ್ರೀಗಳು, ದೇಗುಲದ ಸಂಪತ್ತಿನಿಂದ ಊರಿಗೆ ಶಿಕ್ಷಣ ಸಿಗುವಂತಾಗಬೇಕು, ಊರಿನ ಜನರ ಆರೋಗ್ಯಕ್ಕೆ ಈ ಹಣ ಬಳಕೆಯಾಗಬೇಕು, ಅದಕ್ಕಾಗಿ ಎಲ್ಲ ದೇವಾಲಯಗಳನ್ನು ಸೇರಿಸಿ ಸನಾತನ ಬೋರ್ಡ್ ಸ್ಥಾಪನೆಯಾಗಬೇಕು ಎಂದು ಶ್ರೀಗಳು ಸರ್ಕಾರವನ್ನು ಒತ್ತಾಯಿಸಿದರು.