ಅಪ್ರಾಪ್ತ ಬಾಲಕಿ ಅತ್ಯಾಚಾರ: ಆರೋಪಿಗೆ 20 ವರ್ಷ ಜೈಲು ಶಿಕ್ಷೆಶಿಕ್ಷೆಗೆ ಗುರಿಯಾದ ಆರೋಪಿ ಬಾಗಲಕೋಟೆ ಜಿಲ್ಲೆಯ ಮಂಜುನಾಥ್ ಎನ್. ಪತ್ರೋಟಿ. ಈತ ತನ್ನ ಗೆಳೆಯನ ತಂಗಿ, ಕಾಪು ತಾಲೂಕಿನಲ್ಲಿ ವಾಸವಾಗಿದ್ದ 14 ವರ್ಷದ ಬಾಲಕಿಯನ್ನು ಪ್ರೀತಿಸುವುದಾಗಿ ನಂಬಿಸಿದ್ದ. ಆಕೆ ತನ್ನ ಗದಗ ಜಿಲ್ಲೆಯ ರೋಣ ತಾಲೂಕಿನ ಅಜ್ಜಿ ಮನೆಗೆ ತೆರಳಿದ್ದಾಗ, ಅಲ್ಲಿ ಮಂಜುನಾಥ್ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ, ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ್ದ. ಈ ವಿಚಾರವನ್ನು ಯಾರಿಗಾದರೂ ಹೇಳಿದ್ದಲ್ಲಿ, ತಾನು ವೀಡಿಯೋ ಮಾಡಿದ್ದು, ಅಣ್ಣ ಹಾಗೂ ಮನೆಯವರಿಗೆ ಕಳುಹಿಸುವುದಾಗಿ ಬೆದರಿಸಿದ್ದ.