ಜೆಇಇ ಮೈನ್ ಫಲಿತಾಂಶ: ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಸಾಧನೆದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ನಡೆಸುವ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಜೆಇಇ (ಮೈನ್) 2025 ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ 202 ವಿದ್ಯಾರ್ಥಿಗಳು ತೇರ್ಗಡೆ ಹೊಂದುವ ಮೂಲಕ ಮುಂಬರುವ ಜೆಇಇ ಅಡ್ವಾನ್ಸ್ ಪರೀಕ್ಷೆಗೆ ಅರ್ಹತೆಯನ್ನು ಪಡೆದುಕೊಂಡಿದ್ದಾರೆ.