ಉಡುಪಿ: ಮಧ್ಯಪ್ರಾಚ್ಯದ ದೇಶಗಳಲ್ಲಿ ಪ್ರಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತರಾಷ್ಟ್ರೀಯ ವೈಮಾನಿಕ ನಿರ್ಬಂಧ ವಿಧಿಸಲಾಗಿದೆ ಮತ್ತು ಪ್ರಚಲಿತ ಸ್ಥಿತಿ ಇರಾನ್, ಇಸ್ರೇಲ್, ಲೆಬನಾನ್, ಸೌದಿ ಅರೇಬಿಯಾ ಸೇರಿದಂತೆ ಒಟ್ಟು 11 ದೇಶಗಳ ವೈಮಾನಿಕ ಮಾರ್ಗಗಳನ್ನು ಮುಚ್ಚಲಾಗಿದೆ. ಈ ಅನಿರೀಕ್ಷಿತ ಅಡಚಣೆಯಿಂದಾಗಿ ಜಿಲ್ಲೆಯ ಅನೇಕ ಉದ್ಯೋಗಿಗಳು ಪ್ರಯಾಣಿಕರು ಯುಎಇ (ದುಬೈ) ಸೇರಿದಂತೆ ವಿವಿಧ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿದ್ದಾರೆ. ಅವರ ಸಹಾಯಕ್ಕೆ ಜಿಲ್ಲಾಡಳಿತವು ತುರ್ತು ಕಾರ್ಯಾಚರಣೆ ಕೇಂದ್ರ 24x7 ಕಾರ್ಯನಿರ್ವಹಿಸುತ್ತಿವೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಭಾರತೀಯ ರಾಯಭಾರಿಕಚೇರಿಗಳು ನೀಡುವ ಸೂಚನೆಗಳನ್ನು ಜಿಲ್ಲಾಡಳಿತವು ನಿರಂತರವಾಗಿ ಗಮನಿಸುತ್ತಿದೆ.ಉಡುಪಿ ಜಿಲ್ಲೆಯ ನಿವಾಸಿಗಳು ಅಥವಾ ಅವರ ಸಂಬಂಧಿಕರು ಹೆಚ್ಚಿನ ಮಾಹಿತಿಗಾಗಿ ಮತ್ತು ಸಹಾಯಕ್ಕಾಗಿ ಉಡುಪಿ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ : 0820-2574802 (ಟೋಲ್ ಫ್ರೀ ಸಂಖ್ಯೆ 1077), ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ ದೂ.ಸಂಖ್ಯೆ: 080-22340676, 080-22253707, (ಟೋಲ್ ಫ್ರೀ ಸಂಖ್ಯೆ 1070) ಗೆ ಕರೆ ಮಾಡಿ ಮಾಹಿತಿ ಹಾಗೂ ಸಹಾಯ ಪಡೆಯಬಹುದಾಗಿದೆ.ಸಾರ್ವಜನಿಕರಿಗೆ ಪ್ರಮುಖ ಸೂಚನೆಗಳು: ಮಧ್ಯಪ್ರಾಚ್ಯ ದೇಶಗಳಲ್ಲಿರುವ ಕರ್ನಾಟಕದ ನಿವಾಸಿಗಳು ಹಾಗೂ ಜಿಲ್ಲೆಯವರಿದ್ದಲ್ಲಿ ಅಲ್ಲಿನ ಸ್ಥಳೀಯ ಸರ್ಕಾರಗಳು ನೀಡುವ ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಂಕಷ್ಟದಲ್ಲಿರುವವರು ಆಯಾ ದೇಶದ ಭಾರತೀಯ ರಾಯಭಾರಿ ಕಚೇರಿಯ ಸಹಾಯವಾಣಿ ಅಥವಾ “ಸಾರಥಿ ಸಹಾಯತಾ” ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ. ವಿಸಾ ಸಂಬಂಧಿತ ಸಮಸ್ಯೆಗಳಿದ್ದಲ್ಲಿ ಹತ್ತಿರದ ಎಫ್.ಆರ್.ಆರ್.ಒ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
