ಸಾರಾಂಶ
ಕನ್ನಡಪ್ರಭ ವಾರ್ತೆ ಉಡುಪಿ
ಕ್ರೀಡೆಯಿಂದ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗಲು ಸಾಧ್ಯ. ಕ್ರೀಡೆಯನ್ನು ಸ್ಪರ್ಧಾ ಮನೋಭಾವದಿಂದ ಸ್ವೀಕರಿಸಿದಾಗ ಮಾತ್ರ ಸೋಲು - ಗೆಲುವನ್ನು ಸಮಾನವಾಗಿ ಕಾಣಬಹುದು ಎಂದು ಜಿಲ್ಲಾಧಿಕಾರಿ ಡಾ.ಕೆವಿದ್ಯಾಕುಮಾರಿ ಹೇಳಿದರು. ಅವರು ಬುಧವಾರ ನಗರದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಪ್ರತಿನಿತ್ಯ ಒತ್ತಡದಲ್ಲಿ ಕಾರ್ಯ ನಿರ್ವಹಿಸಬೇಕಾಗುತ್ತದೆ. ಇಂತಹ ಸಂದರ್ಭದಲ್ಲಿ ಎಲ್ಲರೂ ಸೇರಿ ಒಂದು ದಿನವನ್ನು ಕ್ರೀಡಾ ಚಟುವಟಿಕೆಯಲ್ಲಿ ಕಳೆಯುವುದರಿಂದ ಅವರ ಮನೋಲ್ಲಾಸ ಹೆಚ್ಚುತ್ತದೆ, ಜೊತೆಗೆ ಕೆಲಸದ ಒತ್ತಡವನ್ನು ಮರೆಯುವುದಕ್ಕೆ ಸಾಧ್ಯವಾಗುತ್ತದೆ. ಸ್ಪರ್ಧೆಯಲ್ಲಿ ಸೋಲು- ಗೆಲುವನ್ನು ಲೆಕ್ಕಿಸದೆ ಕ್ರೀಡಾ ಮನೋಭಾವದಿಂದ ಭಾಗವಹಿಸಿ ಎಂದವರು ಕರೆ ನೀಡಿದರು. ಮುಖ್ಯ ಅತಿಥಿಯಾಗಿದ್ದ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್. ಮಾತನಾಡಿ, ಕ್ರೀಡೆಯಿಂದ ಪರಸ್ಪರ ಹೊಂದಾಣಿಕೆ ಮನೋಭಾವ, ಕರ್ತವ್ಯದಲ್ಲಿ ಕ್ರಿಯಾಶೀಲತೆ ಹೆಚ್ಚುತ್ತದೆ. ಪ್ರಾಣಾಯಾಮವನ್ನು ಕೂಡ ಕ್ರೀಡೆಯಾಗಿ ಪರಿಗಣಿಸಿ ಅಳವಡಿಸಿಕೊಳ್ಳಿ ಎಂದು ಸಲಹೆ ಮಾಡಿದರು. ಪೊಲೀಸ್ ಉಪವಿಭಾಗಗಳ ವಿವಿಧ ತಂಡದ ಪಥ ಸಂಚಲನ ನಡೆಯಿತು ಹಾಗೂ ಕ್ರೀಡಾಜ್ಯೋತಿಯನ್ನು ಬೆಳಗಿಸಲಾಯಿತು. ಈ ಸಂದರ್ಭದಲ್ಲಿ ವಿವಿಧ ಪೊಲೀಸ್ ಠಾಣೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ. ಸ್ವಾಗತಿಸಿದರು. ಯೋಗೇಶ ನಾಯ್ಕ ನಿರೂಪಿಸಿದರು. ಎಎಸ್‌ಪಿ ಎಸ್.ಟಿ ಸಿದ್ದಲಿಂಗಪ್ಪ ವಂದಿಸಿದರು.
;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))