ಉಡುಪಿ: ಪೊಲೀಸ್‌ ಇಲಾಖೆ ‘ಭಾರತ ಐಕ್ಯತೆ ಓಟ’

| Published : Nov 01 2025, 03:00 AM IST

ಸಾರಾಂಶ

ನಗರದ ಜೋಡುಕಟ್ಟೆಯಿಂದ ಆರಂಭಗೊಂಡ ಐಕ್ಯತೆ ಓಟವು ಬೋರ್ಡ್ ಹೈಸ್ಕೂಲ್ ವರೆಗೆ ಸಾಗಿಬಂತು. ಬಳಿಕ ಶಾಲಾ ಆವರಣದಲ್ಲಿ ಗಿಡ ನೆಟ್ಟು, ದೇಶಸೇವೆಯ ಪ್ರತಿಜ್ಞಾವಿಧಿ ಸ್ವೀಕರಿಸುವ ಕಾರ್ಯಕ್ರಮ ನಡೆಯಿತು.

ಉಡುಪಿ: ದೇಶದ ಪ್ರಥಮ ಉಪಪ್ರಧಾನಿ ಸರ್ದಾರ್ ವಲ್ಲಭಭಾಯಿ ಪಟೇಲ್ 150ನೇ ಜನ್ಮದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಭಾರತ ಐಕ್ಯತೆ ಓಟ ಶುಕ್ರವಾರ ಆಯೋಜಿಸಲಾಗಿತ್ತು. ಇದರಲ್ಲಿ ಪೊಲೀಸ್ ಸಿಬ್ಬಂದಿಗಳು, ಸಾರ್ವಜನಿಕರು ಭಾಗವಹಿಸಿದ್ದರು.

ನಗರದ ಜೋಡುಕಟ್ಟೆಯಿಂದ ಆರಂಭಗೊಂಡ ಐಕ್ಯತೆ ಓಟವು ಬೋರ್ಡ್ ಹೈಸ್ಕೂಲ್ ವರೆಗೆ ಸಾಗಿಬಂತು. ಬಳಿಕ ಶಾಲಾ ಆವರಣದಲ್ಲಿ ಗಿಡ ನೆಟ್ಟು, ದೇಶಸೇವೆಯ ಪ್ರತಿಜ್ಞಾವಿಧಿ ಸ್ವೀಕರಿಸುವ ಕಾರ್ಯಕ್ರಮ ನಡೆಯಿತು.

ಈ ಸಂದರ್ಭ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಮಾತನಾಡಿ, ರಾಜಪ್ರಭುತ್ವದ ರಾಜ್ಯಗಳ ಆಡಳಿತಗಾರರನ್ನು ಒಗ್ಗೂಡಿಸಿ ಏಕ ಭಾರತ ನಿರ್ಮಾಣ ಮಾಡಿದ ಕೀರ್ತಿ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರಿಗೆ ಸಲ್ಲುತ್ತದೆ. ಭಾರತ ಏಕೀಕರಣದಲ್ಲಿ ಅವರ ಪಾತ್ರ ದೊಡ್ಡದು. ಅವರ ಆದರ್ಶ, ವ್ಯಕ್ತಿತ್ವವನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅವಡಿಸಿಕೊಳ್ಳಬೇಕು ಎಂದರು.ಎಎಸ್ಪಿ ಪ್ರಭು ಡಿ.ಟಿ., ಉಡುಪಿ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಮಂಜುನಾಥ್ ವಿ. ಬಡಿಗೇರ್, ಪೊಲೀಸ್ ಉಪನಿರೀಕ್ಷಕ ಭರತೇಶ್, ಪೊಲೀಸ್ ನಿರೀಕ್ಷಕ ನಾರಾಯಣ, ಹಿರಿಯಡಕ ಠಾಣೆಯ ಪೊಲೀಸ್ ಉಪನಿರೀಕ್ಷಕ ಪುನೀತ್ ಕುಮಾರ್, ಮಲ್ಪೆ ಠಾಣೆಯ ಪೊಲೀಸ್ ಉಪನಿರೀಕ್ಷಕ ಅನಿಲ್ ಕುಮಾರ್ ಮತ್ತಿತರರಿದ್ದರು.