ಉಡುಪಿ: ರಾಜ್ಯ ಪೊಲೀಸ್ ಮಹಾನಿರ್ದೇಶಕ ಮತ್ತು ಮಹಾನಿರೀಕ್ಷಕ ಡಾ. ಎಂ.ಎ.ಸಲೀಂ ಉಡುಪಿ ಜಿಲ್ಲೆಯ ಕರಾವಳಿ ಕಾವಲು ಪಡೆ ಮಲ್ಪೆ ಕಚೇರಿ ಹಾಗೂ ಜಿಲ್ಲಾ ಪೊಲೀಸ್ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳ ಸಭೆ ನಡೆಸಿದರು.ಮಂಗಳೂರು ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕ ಅಮಿತ್ ಸಿಂಗ್ ಹಾಗೂ ರಾಜ್ಯ ಆಂತರಿಕ ಭದ್ರತಾ ವಿಭಾಗ ಮತ್ತು ಕರಾವಳಿ ಕಾವಲು ಪಡೆಯ ಪೊಲೀಸ್ ಮಹಾನಿರೀಕ್ಷಕ ವಿಕಾಸ್ ಕುಮಾರ್ ವಿಕಾಸ್ ಉಪಸ್ಥಿತರಿದ್ದರು.ಸಭೆಯಲ್ಲಿ ಮಾತನಾಡಿದ ಡಾ. ಎಂ. ಎ. ಸಲೀಂ ಅವರು, ಜಿಲ್ಲೆಯಲ್ಲಿ ಕೋಮು ಸೌಹಾರ್ದತೆಗೆ ಪೊಲೀಸರು ಕೈಗೊಂಡ ಕ್ರಮವನ್ನು ಶ್ಲಾಘಿಸಿ ಇದೇ ರೀತಿ ಮುಂದುವರೆಸಿಕೊಂಡು ಹೋಗಲು ಸೂಚಿಸಿದರು. ರೌಡಿ ಆಸಾಮಿಗಳ ಹಾಗೂ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲು, ಸೊತ್ತು ಕಳವು ಪ್ರಕರಣಗಳನ್ನು ಪತ್ತೆ ಹಚ್ಚುವ ಜೊತೆಗೆ ತಡೆಗಟ್ಟುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು, ಅಪರಾಧ ಪ್ರಕರಣಗಳನ್ನು ಕಾಲಮಿತಿಯೊಳಗೆ ಇತ್ಯರ್ಥಗೊಳಿಸಲು ಸೂಚಿಸಿದರು.‘ಆಸರೆ’ ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಎಸ್.ಪಿ. ಆಗಿದ್ದ ವೇಳೆಯಲ್ಲಿ ತಾನು ಪರಿಚಯಿಸಿದ್ದು, ಪ್ರಸ್ತುತ ಕರ್ನಾಟಕ ರಾಜ್ಯಾದ್ಯಂತ ಅನುಷ್ಠಾನಗೊಳಿಸಿದ್ದು, ಉಡುಪಿ ಜಿಲ್ಲೆಯಲ್ಲಿ ಇದನ್ನು ಪೂರ್ಣಪ್ರಮಾಣದಲ್ಲಿ ಅನುಷ್ಠಾನಗೊಳಿಸಿರುವುದನ್ನು ಶ್ಲಾಘಿಸಿದರು. ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಉಪಸ್ಥಿತರಿದ್ದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ಎಸ್. ನಾಯ್ಕ್ ಅವರು ಸ್ವಾಗತಿಸಿ ವಂದಿಸಿದರು.
ಉಡುಪಿ ಜಿಲ್ಲಾ ಪೊಲೀಸ್ಗೆ ಡಿಜಿಪಿ ಡಾ. ಎಂ. ಎ. ಸಲೀಂ ಶ್ಲಾಘನೆ
ರಾಜ್ಯ ಪೊಲೀಸ್ ಮಹಾನಿರ್ದೇಶಕ ಮತ್ತು ಮಹಾನಿರೀಕ್ಷಕ ಡಾ. ಎಂ.ಎ.ಸಲೀಂ ಉಡುಪಿ ಜಿಲ್ಲೆಯ ಕರಾವಳಿ ಕಾವಲು ಪಡೆ ಮಲ್ಪೆ ಕಚೇರಿ ಹಾಗೂ ಜಿಲ್ಲಾ ಪೊಲೀಸ್ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳ ಸಭೆ ನಡೆಸಿದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.