ಉಡುಪಿ: ಜಾನಪದ ಸಮ್ಮೇಳನದ ಪೂರ್ವಭಾವಿ ಸಭೆ ಸಂಪನ್ನ

| Published : Jul 25 2024, 01:22 AM IST

ಸಾರಾಂಶ

ಆ.27ರಂದು ಶ್ರೀ ಕೃಷ್ಣ ಜನ್ಮಾಷ್ಟಮಿಯ ವಿಟ್ಲಪಿಂಡಿ ಸಂದರ್ಭದಲ್ಲಿ ಕನ್ನಡ ಜಾನಪದ ಪರಿಷತ್ ಬೆಂಗಳೂರು, ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಮತ್ತು ತಾಲೂಕು ಘಟಕಗಳ ವತಿಯಿಂದ ಉಡುಪಿ ಜಿಲ್ಲಾ ಪ್ರಥಮ ಕನ್ನಡ ಜಾನಪದ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ.

ಕನ್ನಡಪ್ರಭ ವಾರ್ತೆ ಉಡುಪಿ

ಉಡುಪಿ ಶ್ರೀ ಕೃಷ್ಣ ಮಠ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಆಶೀರ್ವಾದದೊಂದಿಗೆ ಆ.27ರಂದು ಶ್ರೀ ಕೃಷ್ಣ ಜನ್ಮಾಷ್ಟಮಿಯ ವಿಟ್ಲಪಿಂಡಿ ಸಂದರ್ಭದಲ್ಲಿ ಕನ್ನಡ ಜಾನಪದ ಪರಿಷತ್ ಬೆಂಗಳೂರು, ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಮತ್ತು ತಾಲೂಕು ಘಟಕಗಳ ವತಿಯಿಂದ ಉಡುಪಿ ಜಿಲ್ಲಾ ಪ್ರಥಮ ಕನ್ನಡ ಜಾನಪದ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ.

ಇದಕ್ಕೆ ಪೂರ್ವಭಾವಿ ಸಭೆಯು ಪರ್ಯಾಯ ಶ್ರೀ ಪುತ್ತಿಗೆ ಮಠದ ದಿವಾಣರಾದ ನಾಗರಾಜ ಆಚಾರ್ಯ ಹಾಗೂ ಮಠದ ವಿದೇಶ ಕಾರ್ಯದರ್ಶಿ ಪ್ರಸನ್ನ ಆಚಾರ್ಯ ಹಾಗೂ ಪರ್ಯಾಯ ಸಾಂಸ್ಕೃತಿಕ ಸಮಿತಿಯ ಸಂಚಾಲಕ ರಮೇಶ್ ಭಟ್ ಕೆ. ಉಪಸ್ಥಿತಿಯೊಂದಿಗೆ ನಡೆಯಿತು.

ಈ ಸಂದರ್ಭ ಸಮ್ಮೇಳನದ ಸಂಪೂರ್ಣ ಮಾಹಿತಿಯನ್ನು ಉಡುಪಿ ಜಿಲ್ಲಾ ಕನ್ನಡ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಡಾ.ಗಣೇಶ್ ಗಂಗೊಳ್ಳಿ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಸುವರ್ಣ ಕಟಪಾಡಿ ಮಾಹಿತಿ ನೀಡಿದರು.

ಜಿಲ್ಲಾ ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಕರ್ವಾಲ್ ಹಾಗೂ ಉಡುಪಿ ತಾಲೂಕು ಅಧ್ಯಕ್ಷ ಮಾಯಾ ಕಾಮತ್, ಉಡುಪಿ ತಾಲೂಕು ಸಂಚಾಲಕ ಪ್ರಭಾ ರಾವ್ ಉಪಸ್ಥಿತರಿದ್ದರು.