ಉಡುಪಿ: ರಾಷ್ಟ್ರೀಯ ದಾಸ ಸಾಹಿತ್ಯ ಸಮ್ಮೇಳ‍ನ ಸಂಪನ್ನ

| Published : Nov 11 2024, 11:47 PM IST

ಉಡುಪಿ: ರಾಷ್ಟ್ರೀಯ ದಾಸ ಸಾಹಿತ್ಯ ಸಮ್ಮೇಳ‍ನ ಸಂಪನ್ನ
Share this Article
  • FB
  • TW
  • Linkdin
  • Email

ಸಾರಾಂಶ

ಶ್ರೀಕೃಷ್ಣ ಮಠದಲ್ಲಿ ಪರ್ಯಾಯ ಶ್ರೀಪಾದರ ಮಾರ್ಗದರ್ಶನದಲ್ಲಿ ಬೆಂಗಳೂರಿನ ಶ್ರೀನಿವಾಸ ಉತ್ಸವ ಬಳಗ ನೇತೃತ್ವದಲ್ಲಿ ರಾಜಾಂಗಣದಲ್ಲಿ ವೈಭವದ ಶ್ರೀವಿಜಯದಾಸರ ಆರಾಧನಾ ಅಂಗವಾಗಿ ನಡೆದ ರಾಷ್ಟ್ರೀಯ ದಾಸ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ ಸೋಮವಾರ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಶ್ರೀಕೃಷ್ಣ ಮಠದಲ್ಲಿ ಪರ್ಯಾಯ ಶ್ರೀಪಾದರ ಮಾರ್ಗದರ್ಶನದಲ್ಲಿ ಬೆಂಗಳೂರಿನ ಶ್ರೀನಿವಾಸ ಉತ್ಸವ ಬಳಗ ನೇತೃತ್ವದಲ್ಲಿ ರಾಜಾಂಗಣದಲ್ಲಿ ವೈಭವದ ಶ್ರೀವಿಜಯದಾಸರ ಆರಾಧನಾ ಅಂಗವಾಗಿ ನಡೆದ ರಾಷ್ಟ್ರೀಯ ದಾಸ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ ಸೋಮವಾರ ನಡೆಯಿತು.ಪರ್ಯಾಯ ಪೀಠಾಧಿಪತಿ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರು ಹಾಗೂ ಶ್ರೀ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹಾಗೂ ಪುತ್ತಿಗೆ ಮಠದ ಕಿರಿಯ ಪಟ್ಟದ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಉಪಸ್ಥಿತರಿದ್ದರು.ಸಮ್ಮೇಳನದ ಅಧ್ಯಕ್ಷ ಡಾ. ಏ.ವಿ. ಶ್ಯಾಮಾಚಾರ್ಯ ಅವರನ್ನು ಪರ್ಯಾಯ ಮಠದಿಂದ ಸನ್ಮಾನಿಸಲಾಯಿತು. ವೈಭವದ ಚಿನ್ನದ ರಥದಲ್ಲಿ ಶ್ರೀನಿವಾಸ ದೇವರ ಮೂರ್ತಿಯನ್ನಿಟ್ಟು ಶ್ರೀ ವಿಜಯದಾಸರ ಭಾವಚಿತ್ರದೊಂದಿಗೆ ವೈಭವದ ಶೋಭಾಯಾತ್ರೆ ನಡೆಯಿತು. ನೂರಾರು ಮಂದಿ ಭಕ್ತರು ಈ ಶೋಭಾಯಾತ್ರೆಯಲ್ಲಿ ಭಾಗವಹಿಸಿದ್ದರು.‘ಹರಿದಾಸರ ದಿನಚರಿತ್ರೆ’ ಚಿತ್ರದ ಟ್ರೇಲರನ್ನು ಶ್ರೀ ವಿಶ್ವಪ್ರಸನ್ನ ತೀರ್ಥರು ಬಿಡುಗಡೆಗೊಳಿಸಿದರು.ಈ ಅಪೂರ್ವ ಚಿತ್ರದಲ್ಲಿ ಪ್ರಸಿದ್ಧ ಗಾಯಕರಾದ ಶ್ರೀ ವಿದ್ಯಾಭೂಷಣರು ಪುರಂದರದಾಸರಾಗಿ ಅಭಿನಯಿಸಿದ್ದಾರೆ. ಚಿತ್ರವು ಡಿಸೆಂಬರ್ ಅಂತ್ಯದಲ್ಲಿ ತೆರೆಗೆ ಬರಲಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ.