ಸಾರಾಂಶ
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಅಧ್ಯಕ್ಷ ಎಂ.ಕೈ ಫೈಝಿ ಅವರನ್ನು ಜಾರಿ ನಿರ್ದೇಶನಾಲಯವು ಅಕ್ರಮವಾಗಿ ಬಂಧಿಸಿರುವುದರ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಯ ಅಂಗವಾಗಿ ಎಸ್‌ಡಿಪಿಐ ಉಡುಪಿ ಜಿಲ್ಲಾ ಘಟಕದ ವತಿಯಿಂದ ನಗರದ ಅಜ್ಜರಕಾಡು ಹುತಾತ್ಮರ ಸ್ಮಾರಕ, ಉಚ್ಚಿಲ ಪೇಟೆ ಹಾಗೂ ಗಂಗೊಳ್ಳಿಯ ಜಾಮಿಯಾ ಮೊಹಲ್ಲಾದಲ್ಲಿ ಮಂಗಳವಾರ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಅಧ್ಯಕ್ಷ ಎಂ.ಕೈ ಫೈಝಿ ಅವರನ್ನು ಜಾರಿ ನಿರ್ದೇಶನಾಲಯವು ಅಕ್ರಮವಾಗಿ ಬಂಧಿಸಿರುವುದರ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಯ ಅಂಗವಾಗಿ ಎಸ್‌ಡಿಪಿಐ ಉಡುಪಿ ಜಿಲ್ಲಾ ಘಟಕದ ವತಿಯಿಂದ ನಗರದ ಅಜ್ಜರಕಾಡು ಹುತಾತ್ಮರ ಸ್ಮಾರಕ, ಉಚ್ಚಿಲ ಪೇಟೆ ಹಾಗೂ ಗಂಗೊಳ್ಳಿಯ ಜಾಮಿಯಾ ಮೊಹಲ್ಲಾದಲ್ಲಿ ಮಂಗಳವಾರ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಯಿತು.ಪಕ್ಷದ ಉಡುಪಿ ಕ್ಷೇತ್ರ ಸಮಿತಿ ವತಿಯಿಂದ ಕ್ಷೇತ್ರ ಅಧ್ಯಕ್ಷ ಅಶ್ರಫ್ ಬಾವ ಅವರ ನೇತೃತ್ವದಲ್ಲಿ ಅಜ್ಜರಕಾಡು ಹುತಾತ್ಮರ ಸ್ಮಾರಕದ ಬಳಿ ಪ್ರತಿಭಟನೆಯನ್ನು ನಡೆಸಲಾಯಿತು.ಪ್ರತಿಭಟನೆಯನ್ನು ಉದ್ದೇಶಿಸಿ ಉಡುಪಿ ಕ್ಷೇತ್ರ ಸಮಿತಿ ಉಪಾಧ್ಯಕ್ಷ ರಹೀಮ್ ಆದಿಉಡುಪಿ ಮಾತನಾಡಿ, ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಎಸ್‌ಡಿಪಿಐ ದೇಶಾದ್ಯಂತ ಹೋರಾಟವನ್ನು ಸಂಘಟಿಸಿದರ ಪರಿಣಾಮ ಕೇಂದ್ರ ಸರ್ಕಾರ ಇಡಿಯನ್ನು ಬಳಸಿ ನಮ್ಮ ರಾಷ್ಟ್ರೀಯ ಅಧ್ಯಕ್ಷರನ್ನು ಅಕ್ರಮವಾಗಿ ಬಂಧಿಸಿದೆ. ಒಂದು ವೇಳೆ ಅವರನ್ನು ಬಿಡುಗಡೆಗೊಳಿಸದಿದ್ದರೆ ಇನ್ನಷ್ಟು ತೀವ್ರವಾಗಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು. ಎಸ್‌ಡಿಪಿಐ ಉಡುಪಿ ಜಿಲ್ಲಾ ಸಮಿತಿ ಸದಸ್ಯೆ ನಸೀಮಾ ಫಾತಿಮಾ ಮಾತನಾಡಿ, ನಮ್ಮ ನಾಯಕರನ್ನು ಬಂಧನ ಮಾಡಿ ಹೋರಾಟವನ್ನು ತಡೆಯಲು ನಿಮಗೆ ಸಾಧ್ಯವಿಲ್ಲ, ನೀವು ಒಬ್ಬ ನಾಯಕರನ್ನು ಬಂಧಿಸಿದರೆ ಇಂತಹ ಸಾವಿರ ನಾಯಕರು ಹುಟ್ಟಿ ಬರಲಿದ್ದಾರೆ ಎಂದು ಕೇಂದ್ರ ಸರ್ಕಾರವನ್ನು ಎಚ್ಚರಿಸಿದರು.ಈ ಸಂದರ್ಭದಲ್ಲಿ ಎಸ್‌ಡಿಪಿಐ ಉಡುಪಿ ಜಿಲ್ಲಾ ನಾಯಕರಾದ ಅಬ್ದುಲ್ ಅಜೀಜ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.