ರಾಹುಲ್ ಗಾಂಧಿಯವರು ದೇಶದ ಭವಿಷ್ಯದ ನಾಯಕರಾಗಿದ್ದು, ಎಷ್ಟೇ ಟೀಕೆಗಳನ್ನು ಅನುಭವಿಸಿದರೂ ಕೂಡ ಎದೆಗುಂದದೆ ಸಾಮಾಜಿಕ ನ್ಯಾಯದ ಪರ ದನಿ ಎತ್ತುವ ಕೆಲಸ ಮಾಡುತ್ತಿದ್ದಾರೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹೇಳಿದರು.
ಉಡುಪಿ: ರಾಹುಲ್ ಗಾಂಧಿಯವರು ದೇಶದ ಭವಿಷ್ಯದ ನಾಯಕರಾಗಿದ್ದು, ಎಷ್ಟೇ ಟೀಕೆಗಳನ್ನು ಅನುಭವಿಸಿದರೂ ಕೂಡ ಎದೆಗುಂದದೆ ಸಾಮಾಜಿಕ ನ್ಯಾಯದ ಪರ ದನಿ ಎತ್ತುವ ಕೆಲಸ ಮಾಡುತ್ತಿದ್ದಾರೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹೇಳಿದರು.
ಉಡುಪಿ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ ಅವರ ಜನ್ಮದಿನದ ಅಂಗವಾಗಿ ಉಡುಪಿಯ ಕಾಂಗ್ರೆಸ್ ಭವನದಲ್ಲಿ ನಡೆದ ವಿಶೇಷ ಚೇತನರಿಗೆ ಸಹಾಯಕ ಸಾಧನಗಳು ಹಾಗೂ ಪೌಷ್ಟಿಕ ಆಹಾರ ಕಿಟ್ ಗಳ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ. ಎ. ಗಫೂರ್ ಆಗಮಿಸಿದ್ದರು.ಸುಮಾರು 75 ಮಂದಿ ವಿಶೇಷ ಚೇತನರಿಗೆ ಸಹಾಯಕ ಸಾಧನಗಳಾದ ಶ್ರವಣ ಸಾಧನ, ಕಂಬೋಡ್ ವೀಲ್ ಚೇರ್, ವಾಟರ್ ಬೆಡ್, ವಾಕರ್, ವಾಕಿಂಗ್ ಸ್ಟಿಕ್, ಕಚ್ ಹಾಗೂ ಪೌಷ್ಟಿಕ ಆಹಾರ ಕಿಟ್ ಗಳನ್ನ ಹಸ್ತಾಂತರಿಸಲಾಯಿತು.
ಪಕ್ಷದ ಪ್ರಮುಖರಾದ ಕಿಶನ್ ಹೆಗ್ಡೆ ಕೊಳ್ಕೆಬೈಲು, ಜ್ಯೋತಿ ಹೆಬ್ಬಾರ್, ಹರಿಪ್ರಸಾದ್ ರೈ, ಹರೀಶ್ ಕಿಣಿ, ಕೀರ್ತಿ ಶೆಟ್ಟಿ, ಬಿ.ನರಸಿಂಹಮೂರ್ತಿ, ಕುಶಲ್ ಶೆಟ್ಟಿ ಇಂದ್ರಾಳಿ, ಕೇಶವ ಕೋಟ್ಯಾನ್, ಸುರೇಶ್ ಶೆಟ್ಟಿ ಬನ್ನಂಜೆ, ಪ್ರಖ್ಯಾತ್ ಶೆಟ್ಟಿ, ಮಹಾಬಲ ಕುಂದರ್, ಪ್ರಶಾಂತ್ ಜತ್ತನ್ನ, ಗಣೇಶ್ ನೆರ್ಗಿ, ಸದಾನಂದ ಕಾಂಚನ್, ಹಬೀಬ್ ಅಲಿ, ಸೌರಭ್ ಬಲ್ಲಾಳ್, ಮಮತಾ ಶೆಟ್ಟಿ ಮತ್ತಿತರರಿದ್ದರು.