ಉಡುಪಿ: ರೆಡ್ ಕ್ರಾಸ್ ನಿಂದ ಗಣರಾಜ್ಯೋತ್ಸವ ಆಚರಣೆ

| Published : Jan 27 2025, 12:46 AM IST

ಸಾರಾಂಶ

ಭಾರತೀಯ ರೆಡ್ ಕ್ರಾಸ್ ಇದರ ಉಡುಪಿ ಜಿಲ್ಲಾ ಘಟಕದ ಆಶ್ರಯದಲ್ಲಿ ಉಡುಪಿ ರೆಡ್ ಕ್ರಾಸ್ ಸಂಸ್ಥೆಯ ವಠಾರದಲ್ಲಿ ಭಾನುವಾರ 76ನೇ ಗಣರಾಜ್ಯೋತ್ಸವ ಆಚರಣೆ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಭಾರತೀಯ ರೆಡ್ ಕ್ರಾಸ್ ಇದರ ಉಡುಪಿ ಜಿಲ್ಲಾ ಘಟಕದ ಆಶ್ರಯದಲ್ಲಿ ಉಡುಪಿ ರೆಡ್ ಕ್ರಾಸ್ ಸಂಸ್ಥೆಯ ವಠಾರದಲ್ಲಿ ಭಾನುವಾರ 76ನೇ ಗಣರಾಜ್ಯೋತ್ಸವ ಆಚರಣೆ ಕಾರ್ಯಕ್ರಮ ನಡೆಯಿತು.

ಜಿಲ್ಲಾ ರೆಡ್ ಕ್ರಾಸ್ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಧ್ವಜಾರೋಹಣ ಮಾಡಿ ಮಾತನಾಡಿ, ‘ನಮ್ಮ ಸಂವಿಧಾನ ನಮ್ಮ ದೇಶದ ಶಕ್ತಿ. ಹಲವರ ತ್ಯಾಗ ಮತ್ತು ಬಲಿದಾನದ ಕಾರಣದಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿ ಗಣರಾಜ್ಯವನ್ನು ರಚಿಸಲು ಸಾಧ್ಯವಾಯಿತು. ನಿಷ್ಠೆಯಿಂದ ಅದನ್ನು ಉಳಿಸಿಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದರು.ಡಾ. ಜಿ. ಶಂಕರ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಲಯನ್ಸ್ ಪ್ರಕೃತಿ ಅಧ್ಯಕ್ಷ ಶೇಖರ್ ಡಿ. ಶೆಟ್ಟಿ, ಬ್ರಹ್ಮಗಿರಿ ಲಯನ್ಸ್ ಕಾರ್ಯದರ್ಶಿ ಶೈನಿ, ಸಂಘಟಕ ಹರಿಪ್ರಸಾದ್ ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದರು. ರೆಡ್ ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರು ಸ್ವಾಗತಿಸಿ ನಿರೂಪಿಸಿದರು. ರೆಡ್ ಕ್ರಾಸ್ ಖಜಾಂಚಿ ರಮಾದೇವಿ ಉಪಸ್ಥಿತರಿದ್ದರು. ವಿವಿಧ ಕಾಲೇಜುಗಳ ರೆಡ್ ಕ್ರಾಸ್ ವಿದ್ಯಾರ್ಥಿಗಳು ಭಾಗವಹಿಸಿದ್ದರು.