ಸಾರಾಂಶ
ಉಡುಪಿಯ ಪ್ರತಿಷ್ಠಿತ ನೇತ್ರಜ್ಯೋತಿ ಕಾಲೇಜಿನಲ್ಲಿ ಜಿಲ್ಲಾ ಸಂಚಾರಿ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ರಸ್ತೆ ಸುರಕ್ಷತಾ ಸಪ್ತಾಹದಂಗವಾಗಿ ಜಾಗೃತಿ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು.
ಕನ್ನಡಪ್ರಭ ವಾರ್ತೆ, ಉಡುಪಿ
ನಗರದ ಪ್ರತಿಷ್ಠಿತ ನೇತ್ರಜ್ಯೋತಿ ಕಾಲೇಜಿನಲ್ಲಿ ಜಿಲ್ಲಾ ಸಂಚಾರಿ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ರಸ್ತೆ ಸುರಕ್ಷತಾ ಸಪ್ತಾಹದಂಗವಾಗಿ ಜಾಗೃತಿ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಉಡುಪಿ ಜಿಲ್ಲಾ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಹುಸೇನ್ ಸಾಬ್ ಅವರು, ರಸ್ತೆ ನಿಯಮಗಳನ್ನು ಪಾಲಿಸುವುದರಿಂದ ಒಂದು ಒಳ್ಳೆಯ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಕಾರಣರಾಗಬೇಕು, ಮಾತ್ರವಲ್ಲದೆ ಸೈಬರ್ ಅಪರಾಧಗಳ ಕುರಿತು ವಿವರವಾಗಿ ವಿದ್ಯಾರ್ಥಿಗಳಿಗೆ ತಿಳಿಸಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ನೇತ್ರಜ್ಯೋತಿ ಕಾಲೇಜಿನ ಅಧ್ಯಕ್ಷೆ ರಶ್ಮಿ ಕೃಷ್ಣಪ್ರಸಾದ್ ಮಾತನಾಡಿ, ಮಾನವನ ಜೀವ ಅಮೂಲ್ಯವಾದದ್ದು, ಅದನ್ನು ನಾವೇ ರಕ್ಷಿಸಿಕೊಳ್ಳಬೇಕು, ಮಾನವೀಯ ಮೌಲ್ಯಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಸಂಚಾರಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಗಳಾದ ರುಕ್ಮೈಯೆರ್, ಸಾವಿತ್ರಿ, ಅಕ್ಷತಾ, ಶ್ರೀನಿವಾಸ್, ಅರುಣ್, ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಗೌರಿ ಪ್ರಭು, ಮಾನವ ಸಂಪನ್ಮೂಲಾಧಿಕಾರಿ ತಾರಾ ಶಶಿಧರ್ ಹಾಗೂ ಸಂಯೋಜಕರಾದ ಸಚಿನ್ ಶೇಟ್ ಹಾಗೂ ನಾಗರಾಜ ಮೆಂಡನ್ ಅವರು ಹಾಜರಿದ್ದರು.ಕಾಲೇಜಿನ ಸಂಯೋಜಕ ಮಾಧವ ಪೂಜಾರಿ ಸ್ವಾಗತಿಸಿದರು. ಉಪನ್ಯಾಸಕಿ ಶ್ರೀನಿಧಿ ವಂದಿಸಿದರು. ಉಪನ್ಯಾಸಕಿ ಅಶ್ವಿನಿ ಪಾಟೀಲ್ ಅವರು ಕಾರ್ಯಕ್ರಮ ನಿರೂಪಿಸಿದರು.