ಉಡುಪಿ ಜಿಲ್ಲಾ ಕನ್ನಡ ಸಾಹಿತ್ತು ಪರಿಷತ್ತು ಮತ್ತು ಕಾಪು ತಾಲೂಕು ಘಟಕ ಸಂಯುಕ್ತವಾಗಿ ಬಂಟಕಲ್ಲು ಕಸಾಪ ಕಾರ್ಯಾಲಯ ‘ನುಡಿ’ ಇಲ್ಲಿ ಏರ್ಪಡಿಸಿದ ಸಭೆಯಲ್ಲಿ ಹಿರಿಯ ಗಾಯಕಿ ಎಸ್. ಜಾನಕಿಯವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಮರ್ಪಿಸಲಾಯಿತು.

ಕಾಪು: ಉಡುಪಿ ಜಿಲ್ಲಾ ಕನ್ನಡ ಸಾಹಿತ್ತು ಪರಿಷತ್ತು ಮತ್ತು ಕಾಪು ತಾಲೂಕು ಘಟಕ ಸಂಯುಕ್ತವಾಗಿ ಬಂಟಕಲ್ಲು ಕಸಾಪ ಕಾರ್ಯಾಲಯ ‘ನುಡಿ’ ಇಲ್ಲಿ ಏರ್ಪಡಿಸಿದ ಸಭೆಯಲ್ಲಿ ಹಿರಿಯ ಗಾಯಕಿ ಎಸ್. ಜಾನಕಿಯವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಮರ್ಪಿಸಲಾಯಿತು.

ಈ ಸಂದರ್ಭ ಮಾತನಾಡಿದ ಉಡುಪಿ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಸಂಗೀತದ ಮೇರು ಪ್ರತಿಭೆ ಎಸ್. ಜಾನಕಿ ಅವರು ಹಾಡಿದ ಹಾಡುಗಳು ಅಜರಾಮರ. ಯಾವುದೇ ಅಹಂ ಭಾವನೆಯಿರದ ವ್ಯಕ್ತಿತ್ವದ ಅವರ ನೆನಪು ಚಿರಸ್ಥಾಯಿ ಎಂದರು.

ಉಡುಪಿ ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಸಾಂದರ್ಭಿಕವಾಗಿ ಮಾತನಾಡಿದರು. ಕಾಪು ತಾಲೂಕು ಕಸಾಪ ಅಧ್ಯಕ್ಷ ಬಿ.ಪುಂಡಲೀಕ ಮರಾಠೆ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಉಡುಪಿ ಜಿಲ್ಲಾ ಕಸಾಪ ಕೋಶಾಧ್ಯಕ್ಷ ಮನೋಹರ ಪಿ., ಕಾಪು ಘಟಕದ ಗೌರವ ಕಾರ್ಯದರ್ಶಿ ನೀಲಾನಂದ ನಾಯ್ಕ್, ಗೌರವ ಕೋಶಾಧ್ಯಕ್ಷ ವಿದ್ಯಾಧರ್ ಪುರಾಣಿಕ್, ಸಹ ಕಾರ್ಯದರ್ಶಿ ಕೃಷ್ಣಕುಮಾರ್ ರಾವ್ ಮಟ್ಟು, ಸಂಘಟನಾ ಕಾರ್ಯದರ್ಶಿ ದೀಪಕ್ ಬೀರ, ಮಧುಕರ್ ಎಸ್., ಸುಂದರ ಟಿ., ಜಿನೇಶ್ ಬಲ್ಲಾಳ್, ಎಸ್.ಎಸ್. ಪ್ರಸಾದ್ ಉಪಸ್ಥಿತರಿದ್ದರು.