ಸಾರಾಂಶ
ಎಂಜಿಎಂ ಸಂಧ್ಯಾ ಕಾಲೇಜಿನ ೩ನೇ ಸಂಸ್ಥಾಪನಾ ದಿನಾಚರಣೆ ಶನಿವಾರ ನೂತನ ರವೀಂದ್ರ ಮಂಟಪದಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಒಟ್ಟು ೯,೧೦,೦೦೦ ರು. ಮೌಲ್ಯದ ವಿದ್ಯಾರ್ಥಿವೇತನವನ್ನು ಎಂಜಿಎಂ ಕಾಲೇಜಿನ ಟ್ರಸ್ಟ್ ಅಧ್ಯಕ್ಷ ಟಿ. ಸತೀಶ್ ಯು. ಪೈ ಅರ್ಹ ವಿದ್ಯಾರ್ಥಿಗಳಿಗೆ ವಿತರಿಸಿದರು.
ಕನ್ನಡಪ್ರಭ ವಾರ್ತೆ ಉಡುಪಿ
ಎಂಜಿಎಂ ಸಂಧ್ಯಾ ಕಾಲೇಜಿನ ೩ನೇ ಸಂಸ್ಥಾಪನಾ ದಿನಾಚರಣೆ ಶನಿವಾರ ನೂತನ ರವೀಂದ್ರ ಮಂಟಪದಲ್ಲಿ ಜರುಗಿತು.ಕಾರ್ಯಕ್ರಮದಲ್ಲಿ ಒಟ್ಟು ೯,೧೦,೦೦೦ ರು. ಮೌಲ್ಯದ ವಿದ್ಯಾರ್ಥಿವೇತನವನ್ನು ಎಂಜಿಎಂ ಕಾಲೇಜಿನ ಟ್ರಸ್ಟ್ ಅಧ್ಯಕ್ಷ ಟಿ. ಸತೀಶ್ ಯು. ಪೈ ಅರ್ಹ ವಿದ್ಯಾರ್ಥಿಗಳಿಗೆ ವಿತರಿಸಿದರು.ಈ ಸಂದರ್ಭದಲ್ಲಿ ಕಾಲೇಜಿನ ವಾರ್ಷಿಕ ಪತ್ರಿಕೆ ‘ಹೊರಿಜಾನ್’ ಬಿಡುಗಡೆಗೊಳಿಸಲಾಯಿತು. ಶಿಕ್ಷಕರ ದಿನಾಚರಣೆಯ ಅಂಗವಾಗಿ ಹಿರಿಯ ಪ್ರಾಧ್ಯಾಪಕ ಡಾ. ಪ್ರಭಾಕರ್ ಶಾಸ್ತ್ರಿ ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ. ಶಾಸ್ತ್ರಿ, ಗುರು-ಶಿಷ್ಯ ಸಂಬಂಧವೇ ಶಿಕ್ಷಣದ ನಿಜವಾದ ಬಲ ಎಂದರು.ಇದೇ ಕಾರ್ಯಕ್ರಮದಲ್ಲಿ ಮಕುಬ ಕ್ರಿಯೇಷನ್ ಸಹಯೋಗದಲ್ಲಿ ಎಂಜಿಎಂ ಸಂಧ್ಯಾ ಕಾಲೇಜಿನ ವಿದ್ಯಾರ್ಥಿಗಳು ಅಭಿನಯಿಸಿರುವ ‘ಟ್ರಾಕ್’ ಎಂಬ ಸಾಮಾಜಿಕ ಕೆಡುಕುಗಳನ್ನು ಪ್ರತಿಬಿಂಬಿಸುವ ಕಿರುಚಿತ್ರ ಬಿಡುಗಡೆಗೊಳಿಸಲಾಯಿತು.ಮುಖ್ಯ ಅತಿಥಿ ಎಂಜಿಎಂ ಪಿಯು ಕಾಲೇಜಿನ ಪ್ರಾಂಶುಪಾಲೆ ಮಾಲತಿ ದೇವಿ ಅವರು ತಮ್ಮ ಮಾತುಗಳಲ್ಲಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಎಂಜಿಎಂ ಕಾಲೇಜಿನ ಪ್ರಾಂಶುಪಾಲೆ ಪ್ರೊ. ವನಿತಾ ಮಯ್ಯ ಮುಖ್ಯ ಭಾಷಣ ನೀಡಿದರು.ಸಂಧ್ಯಾ ಕಾಲೇಜಿನ ಪ್ರಾಚಾರ್ಯ ಡಾ. ದೇವಿದಾಸ್ ಎಸ್. ನಾಯಕ್ ಅತಿಥಿಗಳನ್ನು ಸ್ವಾಗತಿಸಿದರು. ಬಿಬಿಎ ಸಂಯೋಜಕಿ ಡಾ.ಮಲ್ಲಿಕಾ ಎ. ಶೆಟ್ಟಿ ವಂದಿಸಿದರು. ಕಂಪ್ಯೂಟರ್ ಸೈನ್ಸ್ ವಿಭಾಗದ ಪ್ರಾಧ್ಯಾಪಕಿ ವರ್ಷಿಣಿ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಅಕ್ಷತಾ ನಾಯಕ್ ಮತ್ತು ಉಪನ್ಯಾಸಕ ಸನತ್ ಕೋಟ್ಯಾನ್ ಸಹಕರಿಸಿದರು.