ಉಡುಪಿ: ಅಂಬಲಪಾಡಿಯ ಬಂಕೇರಕಟ್ಟ ಎನ್.ಸಿ. ಯೂತ್ ಸ್ಪೋರ್ಟ್ಸ್ ಎಂಡ್ ಕಲ್ಚರಲ್ ಕ್ಲಬ್ ಆಶ್ರಯದಲ್ಲಿ ಶ್ರೀ ನಾಗರಾಜ ಸೇವಾ ಸಮಿತಿ ಮತ್ತು ಶ್ರೀ ನಾಗರಾಜ ಮಹಿಳಾ ಸೇವಾ ಸಮಿತಿಗಳ ಸಹಯೋಗದಲ್ಲಿ ಕೆಸರ್ಡ್ ಒಂಜಿ ದಿನ, ಗ್ರಾಮೀಣ ಕ್ರೀಡಾ ಕೂಟವು ಕ್ಲಬ್ಬಿನ ಅಧ್ಯಕ್ಷ ಕಾರ್ತಿಕ್ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಕ್ರೀಡಾ ಕೂಟವನ್ನು ಉಡುಪಿ ತಾಪಂ ಮಾಜಿ ಉಪಾಧ್ಯಕ್ಷ ರಾಜೇಂದ್ರ ಪಂದುಬೆಟ್ಟು ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಪರಂಪರೆಯನ್ನು ಹೊಸ ಪೀಳಿಗೆಗೆ ಪರಿಚಯಿಸಿ, ಗ್ರಾಮೀಣ ಆಚರಣೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕೆಸರ್ಡ್ ಒಂಜಿ ದಿನ ಕಾರ್ಯಕ್ರಮ ಮಹತ್ವಪೂರ್ಣ ಎಂದರು. ಕೆಸರು ಗದ್ದೆಗೆ ಸಾಮೂಹಿಕ ಹಾಲು ಎರೆಯುವ ಮೂಲಕ ಗ್ರಾಮೀಣ ಕ್ರೀಡಾ ಕೂಟ ಚಾಲನೆಗೊಂಡಿತು. ವಿವಿಧ ವಯೋಮಾನದ ವಿಭಾಗಗಳಲ್ಲಿ ವಿದ್ಯಾರ್ಥಿಗಳು, ಯುವಕ, ಯುವತಿಯರು ಹಾಗೂ ಹಿರಿಯರು ಕ್ರೀಡಾ ಕೂಟದಲ್ಲಿ ಸಕ್ರಿಯವಾಗಿ ಭಾಗವಹಿಸಿ ಕೆಸರು ಗದ್ದೆಯಲ್ಲಿ ಸಂಭ್ರಮಿಸಿದರು. ಮಧ್ಯಾಹ್ನ ನಡೆದ ಸಾಮೂಹಿಕ ಭೋಜನದಲ್ಲಿ 500ಕ್ಕೂ ಮಿಕ್ಕಿ ಕ್ರೀಡಾ ಪಟುಗಳು ಮತ್ತು ಗ್ರಾಮಸ್ಥರು ಪಾಲ್ಗೊಂಡರು.ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಮಲ್ಪೆ ಬಿಲ್ಲವರ ಸೇವಾ ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ ಅವರು ವಿಜೇತರಿಗೆ ಬಹುಮಾನ ವಿತರಿಸಿದರು.

ಈ ಕಾರ್ಯಕ್ರಮಗಳಲ್ಲಿ ಸಂಘದ ಗೌರವಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಶ್ರೀ ನಾಗರಾಜ ಸೇವಾ ಸಮಿತಿಯ ಅಧ್ಯಕ್ಷ ಶಿವಾಜಿ ಸನಿಲ್, ಗೌರವಾಧ್ಯಕ್ಷರಾದ ಸುಧಾಕರ ಮೆಂಡನ್ ಮತ್ತು ವಿಶ್ವನಾಥ್ ಹೆಗ್ಡೆ, ಜಿಲ್ಲಾ ಅತ್ಲೆಟಿಕ್ ಎಸೋಸಿಯೋಷನ್ ಅಧ್ಯಕ್ಷ ಹರಿಪ್ರಸಾದ್ ರೈ, ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಶಿವದಾಸ್ ಪಿ., ಶ್ರೀ ಬಬ್ಬುಸ್ವಾಮಿ ದೈವಸ್ಥಾನದ ಗುರಿಕಾರ ದೇವದಾಸ್, ಅಪರ ಜಿಲ್ಲಾಧಿಕಾರಿಗಳ ಆಪ್ತ ಸಹಾಯಕ ಯತೀಶ್ ಕಿದಿಯೂರು, ಕ್ಲಬ್‌ನ ಸ್ಥಾಪಕಾಧ್ಯಕ್ಷ ದಾಮೋದರ್ ಕುಂದರ್, ಉಪಾಧ್ಯಕ್ಷ ಗಣೇಶ್ ಬಂಗೇರ, ಪ್ರಧಾನ ಕಾರ್ಯದರ್ಶಿ ರೂಪೇಶ್ ಪೂಜಾರಿ, ಸಂಘಟನಾ ಕಾರ್ಯದರ್ಶಿ ನವೀನ್ ಸುವರ್ಣ, ಕೋಶಾಧಿಕಾರಿ ಪ್ರಸನ್ನ ಶ್ರೀಯಾನ್, ಕ್ರೀಡಾ ಕಾರ್ಯದರ್ಶಿ ಕಾರ್ತಿಕ್ ಎಸ್. ಪೂಜಾರಿ, ಸಾಂಸ್ಕೃತಿಕ ಕಾರ್ಯದರ್ಶಿ ಯತೀಶ್ ಸುವರ್ಣ, ಲಯನ್ಸ್ ಕ್ಲಬ್ ಪ್ರಾಂತ್ಯ ಅಧ್ಯಕ್ಷ ಲೂಯಿಸ್ ಲೋಬೊ, ವೃತ್ತಿ ಪರ ಕೃಷಿಕ ಪಠೇಲರ ಮನೆ ಶರತ್ ಶೆಟ್ಟಿ, ಶ್ರೀ ವಿಠೋಬ ಭಜನಾ ಮಂದಿರದ ಪ್ರಧಾನ ಕಾರ್ಯದರ್ಶಿ ರಾಜೇಶ್, ಶ್ರೀ ಉಮಾಮಹೇಶ್ವರ ಭಜನಾ ಮಂದಿರದ ಅಧ್ಯಕ್ಷ ಸುಧಾಕರ್, ಶ್ರೀ ನಾಗರಾಜ ಮಹಿಳಾ ಸೇವಾ ಸಮಿತಿಯ ಉಪಾಧ್ಯಕ್ಷೆ ಲಲಿತಾ ನಾರಾಯಣ, ಗ್ರಾಪಂ ಮಾಜಿ ಅಧ್ಯಕ್ಷೆ ಭಾರತಿ ಭಾಸ್ಕರ್ ಮತ್ತಿತರರು ಉಪಸ್ಥಿತರಿದ್ದರು. ಅಶ್ವಥ್ ಪೂಜಾರಿ ಕಟಪಾಡಿ ಕಾರ್ಯಕ್ರಮ ನಿರೂಪಿಸಿದರು.