ಸಾರಾಂಶ
ಪರ್ಯಾಯ ಶ್ರೀ ಪುತ್ತಿಗೆ ಮಠದ ವತಿಯಿಂದ ಶ್ರೀ ಕೃಷ್ಣಮಠದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆಯುತ್ತಿರುವ 48 ದಿನಗಳ ಕಾಲದ ಮಂಡಲೋತ್ಸವ ಕಾರ್ಯಕ್ರಮದಲ್ಲಿ ಗುರುವಾರ ಇಸ್ಕಾನ್ ಸಂಸ್ಥೆಯ ಅಂತಾರಾಷ್ಟ್ರೀಯ ಸಂಯೋಜಕ, ಜನಪ್ರಿಯ ವಾಗ್ಮಿ ಶ್ರೀ ಗೌರಂಗದಾಸ್ ಭಾಗವಹಿಸಿದ್ದರು.
ಕನ್ನಡಪ್ರಭ ವಾರ್ತೆ ಉಡುಪಿ
ಪರ್ಯಾಯ ಶ್ರೀ ಪುತ್ತಿಗೆ ಮಠದ ವತಿಯಿಂದ ಶ್ರೀ ಕೃಷ್ಣಮಠದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆಯುತ್ತಿರುವ 48 ದಿನಗಳ ಕಾಲದ ಮಂಡಲೋತ್ಸವ ಕಾರ್ಯಕ್ರಮದಲ್ಲಿ ಗುರುವಾರ ಇಸ್ಕಾನ್ ಸಂಸ್ಥೆಯ ಅಂತಾರಾಷ್ಟ್ರೀಯ ಸಂಯೋಜಕ, ಜನಪ್ರಿಯ ವಾಗ್ಮಿ ಶ್ರೀ ಗೌರಂಗದಾಸ್ ಭಾಗವಹಿಸಿದ್ದರು.ಶ್ರೀ ಗೌರಂಗದಾಸ್ ಅವರನ್ನು ಶ್ರೀ ಕೃಷ್ಣಮಠ ಮುಖ್ಯದ್ವಾರದಲ್ಲಿ ಸಂಪ್ರದಾಯದಂತೆ ಸ್ವಾಗತಿಸಲಾಯಿತು. ಅವನ್ನು ಪರ್ಯಾಯ ಪೀಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಬರಮಾಡಿಕೊಂಡು, ನಂತರ ಅವರು ಕನಕನ ಕಿಂಡಿಯ ಮೂಲಕ ಶ್ರೀ ಕೃಷ್ಣ ದೇವರ ದರ್ಶನ ಮಾಡಿಸಿದರು. ಗೀತಾಮಂದಿರದಲ್ಲಿ ಶ್ರೀಗಳ ಜಾಗತಿಕ ಮಟ್ಟದ ಕೋಟಿ ಗೀತಾ ಲೇಖನ ಅಭಿಯಾನದ ಮಾಹಿತಿ ಪಡೆದ ಶ್ರೀ ಗೌರಂಗದಾಸ್ ಸಂತಸ ವ್ಯಕ್ತಪಡಿಸಿದರು.ಸಂಜೆ ರಾಜಾಂಗಣದಲ್ಲಿ ನಡೆದ ಸಭೆಯಲ್ಲಿ ಪರ್ಯಾಯ ಉಭಯ ಶ್ರೀಪಾದರ ಉಪಸ್ಥಿತಿಯಲ್ಲಿ ಗೌರಂಗದಾಸ್ ಅವರು ವಿಶೇಷ ಉಪನ್ಯಾಸ ನೀಡಿದರು. ಅವರು ಶ್ರೀಗಳು ಶ್ರೀ ಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವಿಸಿದರು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್‌ನ ಮುಖ್ಯಸ್ಥ ಡಾ. ವೆಂಕಟ ರಮಣ ಅಕ್ಕರಾಜು ಭಾಗವಹಿಸಿದ್ದರು. ಪುತ್ತಿಗೆ ಕಿರಿಯ ಪಟ್ಟ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು ಸಾನಿಧ್ಯ ವಹಿಸಿದ್ದರು. ಶ್ರೀಗಳ ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯರು ಅತಿಥಿಗಳನ್ನು ಗೌರವಿಸಿದರು. ವಿದ್ವಾನ್ ಗೋಪಾಲಾಚಾರ್ಯ ನಿರೂಪಿಸಿದರು.