ಸಾರಾಂಶ
ಬಿಜೆಪಿ ಉಡುಪಿ ನಗರ ಮಂಡಲ ವತಿಯಿಂದ ನಗರ ಮಂಡಲಾಧ್ಯಕ್ಷ ದಿನೇಶ್ ಅಮೀನ್ ಅಧ್ಯಕ್ಷತೆಯಲ್ಲಿ ಬಿಜೆಪಿ ಸದಸ್ಯತಾ ಅಭಿಯಾನದ ಮಾಹಿತಿ ಕಾರ್ಯಾಗಾರ ನಡೆಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ಸೆ.2ರಂದು ಪ್ರಾರಂಭಗೊಳ್ಳಲಿರುವ ‘ಬಿಜೆಪಿ ಸದಸ್ಯತಾ ಅಭಿಯಾನ’ದಲ್ಲಿ ಪಕ್ಷದ ಪ್ರಮುಖರು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸಿ, ಸದಸ್ಯತನ ನೋಂದಣಿಯಲ್ಲಿ ಉಡುಪಿ ನಗರ ರಾಜ್ಯದಲ್ಲೇ ಮುಂಚೂಣಿ ಸ್ಥಾನ ಪಡೆಯುವಂತೆ ಸಂಘಟಿತ ಶ್ರಮ ವಹಿಸಬೇಕು ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಕರೆ ನೀಡಿದರು.ಅವರು ಬಿಜೆಪಿ ಉಡುಪಿ ನಗರ ಮಂಡಲ ವತಿಯಿಂದ ನಗರ ಮಂಡಲಾಧ್ಯಕ್ಷ ದಿನೇಶ್ ಅಮೀನ್ ಅಧ್ಯಕ್ಷತೆಯಲ್ಲಿ ನಡೆದ ಬಿಜೆಪಿ ಸದಸ್ಯತಾ ಅಭಿಯಾನದ ಮಾಹಿತಿ ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿದರು.ಸೆ.2ರಂದು 8800002024ಕ್ಕೆ ಮಿಸ್ ಕಾಲ್ ನೀಡುವ ಮೂಲಕ ಸ್ವಯಂ ಸದಸ್ಯತನ ಪಡೆದು, ಬಳಿಕ 18 ವರ್ಷ ಮೇಲ್ಪಟ್ಟ ಕುಟುಂಬದ ಸದಸ್ಯರು ಮತ್ತು ಪರಿಸರದ ಹಿತೈಷಿಗಳನ್ನು ಗರಿಷ್ಠ ಸಂಖ್ಯೆಯಲ್ಲಿ ನೋಂದಾಯಿಸಿ ಅಭಿಯಾನವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದರು.ಬಿಜೆಪಿ ಸದಸ್ಯತಾ ಅಭಿಯಾನದ ಜಿಲ್ಲಾ ಸಂಚಾಲಕ ಮಟ್ಟಾರ್ ರತ್ನಾಕರ ಹೆಗ್ಡೆ ಮತ್ತು ಅಭಿಯಾನದ ಜಿಲ್ಲಾ ಪ್ರಮುಖ್ ದಿನಕರ ಶೆಟ್ಟಿ ಹೆರ್ಗ ಸದಸ್ಯತಾ ಅಭಿಯಾನದ ಕುರಿತು ವಿಸ್ತೃತ ಮಾಹಿತಿ ನೀಡಿದರು.ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು, ಸದಸ್ಯತಾ ಅಭಿಯಾನದ ಉಡುಪಿ ನಗರ ಸಹ ಸಂಚಾಲಕ ಶ್ರೀನಿಧಿ ಹೆಗ್ದೆ, ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಿ. ಶೆಟ್ಟಿ ಉಪಸ್ಥಿತರಿದ್ದರು. ನಗರ ಪ್ರಧಾನ ಕಾರ್ಯದರ್ಶಿ ಜಗದೀಶ್ ಆಚಾರ್ಯ ಕಪ್ಪೆಟ್ಟು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.