ಉಡುಪಿ ಶ್ರೀಕೃಷ್ಣಮಠದ ಪರ್ಯಾಯ ಶ್ರೀ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪುರಪ್ರವೇಶ, ಪರ್ಯಾಯೋತ್ಸವವನ್ನು ಅತ್ಯಂತ ಸುವ್ಯವಸ್ಥಿತವಾಗಿ ಮತ್ತು ಶಾಂತಿಯುತವಾಗಿ ನಡೆಯಲು ಹಗಲುರಾತ್ರಿ ಸಹಕರಿಸಿದ ಉಡುಪಿ ಪೊಲೀಸ್ ಇಲಾಖೆಯ ಸರ್ಕಲ್ ಇನ್‌ಸ್ಪೆಕ್ಟರ್, ಸಬ್ ಇನ್‌ಸ್ಪೆಕ್ಟರ್‌ಗಳು ಹಾಗೂ ಹಾಗೂ ಕರ್ತವ್ಯ ನಿರ್ವಹಿಸಿದ ಎಲ್ಲಾ ಸಿಬ್ಬಂದಿಯನ್ನು ಶ್ರೀಪಾದರು ಶಾಲು ಫಲ ಮಂತ್ರಾಕ್ಷತೆ
ಉಡುಪಿ: ಉಡುಪಿ ಶ್ರೀಕೃಷ್ಣಮಠದ ಪರ್ಯಾಯ ಶ್ರೀ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪುರಪ್ರವೇಶ, ಪರ್ಯಾಯೋತ್ಸವವನ್ನು ಅತ್ಯಂತ ಸುವ್ಯವಸ್ಥಿತವಾಗಿ ಮತ್ತು ಶಾಂತಿಯುತವಾಗಿ ನಡೆಯಲು ಹಗಲುರಾತ್ರಿ ಸಹಕರಿಸಿದ ಉಡುಪಿ ಪೊಲೀಸ್ ಇಲಾಖೆಯ ಸರ್ಕಲ್ ಇನ್‌ಸ್ಪೆಕ್ಟರ್, ಸಬ್ ಇನ್‌ಸ್ಪೆಕ್ಟರ್‌ಗಳು ಹಾಗೂ ಹಾಗೂ ಕರ್ತವ್ಯ ನಿರ್ವಹಿಸಿದ ಎಲ್ಲಾ ಸಿಬ್ಬಂದಿಯನ್ನು ಶ್ರೀಪಾದರು ಶಾಲು ಫಲ ಮಂತ್ರಾಕ್ಷತೆ ನೀಡಿ ಅನುಗ್ರಹಿಸಿದರು.
ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಹರಿರಾಂ ಶಂಕರ್, ಎಎಸ್ಪಿ ಸುಧಾಕರ್ ನಾಯ್ಕ್ ಡಿವೈಎಸ್ಪಿಗಳಾದ ಪ್ರಭು ಡಿ.ಟಿ. ಮತ್ತು ತಿಮ್ಮಪ್ಪ ಗೌಡ, ಶೀರೂರು ಮಠದ ದಿವಾನರಾದ ಡಾ.ಉದಯ ಕುಮಾರ್ ಸರಳತ್ತಾಯ ಹಾಗೂ ಶೀರೂರು ಪರ್ಯಾಯ ಸ್ವಾಗತ ಸಮಿತಿಯ ಮೋಹನ್ ಭಟ್, ಮಧುಕರ್ ಮುದ್ರಾಡಿ ಮತ್ತಿತರರಿದ್ದರು.