ಉಡುಪಿ: ವಿಕಲಚೇತನ ಮಕ್ಕಳ ಅಥ್ಲೆಟಿಕ್ ಕ್ರೀಡಾಕೂಟ ಸಂಪನ್ನ

| Published : Nov 29 2024, 01:05 AM IST

ಸಾರಾಂಶ

ಉಡುಪಿ ಜಿಲ್ಲಾಡಳಿತ ಮತ್ತು ಮಂಗಳೂರು ವಿಶ್ವವಿದ್ಯಾನಿಲಯಗಳ ಆಶ್ರಯದಲ್ಲಿ ಗುರುವಾರ ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ವಿಕಲಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಲಯನ್ ಜಿಲ್ಲಾ ಗವರ್ನರ್ ಮೊಹಮ್ಮದ್ ಹನೀಫ್ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಉಡುಪಿ ಜಿಲ್ಲಾಡಳಿತ ಮತ್ತು ಮಂಗಳೂರು ವಿಶ್ವವಿದ್ಯಾನಿಲಯಗಳ ಆಶ್ರಯದಲ್ಲಿ ಗುರುವಾರ ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ವಿಕಲಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಲಯನ್ ಜಿಲ್ಲಾ ಗವರ್ನರ್ ಮೊಹಮ್ಮದ್ ಹನೀಫ್ ಚಾಲನೆ ನೀಡಿದರು.ಈ ಸಂದರ್ಭ ಮಾತನಾಡಿದ ಅವರು, ವಿಶೇಷ ಮಕ್ಕಳ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರ ಸೇವೆ ಅಗಾಧವಾದುದು. ಅವರು ಮಕ್ಕಳನ್ನು ಹುರಿದುಂಬಿಸುತ್ತಿರುವ ರೀತಿ ಮಕ್ಕಳು ಕ್ರೀಡಾಕೂಟದಲ್ಲಿ ಭಾಗವಹಿಸುವಿಕೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ. ಮುಂದಿನ ದಿನಗಳಲ್ಲಿ ಈ ಎಲ್ಲ ಮಕ್ಕಳು ಉತ್ತಮ ಭವಿಷ್ಯ ಹೊಂದುವಂತಾಗಲಿ ಎಂದು ಆಶಿಸಿದರು.ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ನಿತ್ಯಾನಂದ ವಿ. ಗಾಂವ್ಕರ್ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭ ವಿಶೇಷ ಕ್ರೀಡಾ ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.

ಕಾರ್ಯಕ್ರಮದಲ್ಲಿ ಲಿಯೋ ಜಿಲ್ಲಾ ಅಧ್ಯಕ್ಷೆ ಶರೋನ್ ಮಬೀನ್, ರೀಜನಲ್ ಚೇರ್ ಪರ್ಸನ್ ವಿ.ಎಸ್. ಉಮ್ಮರ್, ಲಿಯೋ ಜಿಲ್ಲಾ ಸಂಯೋಜಕ ಮೊಹಮ್ಮದ್ ಮೌಲಾ, ಲಯನ್ಸ್ ಕ್ಲಬ್ ಉಡುಪಿ ಅಮೃತ್ ಅಧ್ಯಕ್ಷ ಗೋಪಾಲ ಅಂಚನ್, ರಾಜ್ಯ ವಿಶೇಷ ಶಿಕ್ಷಕ/ ಶಿಕ್ಷಕೇತರರ ಸಂಘ ರಾಜ್ಯಾಧ್ಯಕ್ಷೆ ಡಾ. ಶಾಂತಿ ಹರೀಶ್, ಕರ್ನಾಟಕ ರಾಜ್ಯ ಶಿಕ್ಷಕರ ಸಂಘದ ಗೌರವಾಧ್ಯಕ್ಷ ಆಗ್ನೇಸ್ ಕುಂದರ್, ರವೀಂದ್ರ ಎಚ್., ಪಾಲಕರ ಸಂಘ ಅಧ್ಯಕ್ಷ ಜಯ ವಿಠಲ್, ಜಿಲ್ಲೆಯ ವಿವಿಧ ವಿಶೇಷ ಚೇತನ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿ, ನಿರೂಪಿಸಿದರು. ಪ್ರೊ. ಪ್ರಶಾಂತ್ ವಂದಿಸಿದರು.