ಸಾರಾಂಶ
ಉಡುಪಿ ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನ ಸ್ಥಾಪಾ ದಿನಾಚಾರಣೆ ವಿಜೃಂಭಣೆಯಿಂದ ನಡೆಯಿತು.
ಉಡುಪಿ: ನಗರದ ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನ ಸ್ಥಾಪಾ ದಿನಾಚಾರಣೆ ವಿಜೃಂಭಣೆಯಿಂದ ನಡೆಯಿತು.
ಕಾಲೇಜಿನ ಮಾನವಿಕ ವಿಭಾಗದ ಮುಖ್ಯಸ್ಥ ರೋಹಿತ್ ಎಸ್. ಅಮೀನ್ ಅವರು ಧ್ವಜಾರೋಹಣ ನೆರವೇರಿಸಿ, ರಾಷ್ಟ್ರೀಯ ಸೇವಾ ಯೋಜನೆ ಯುವಜನರಲ್ಲಿ ಶಿಸ್ತು, ಸಮರ್ಪಣೆ ಹಾಗೂ ಸಮಾಜ ಸೇವೆಯ ಬದ್ಧತೆಯನ್ನು ಬೆಳೆಸುವ ವೇದಿಕೆಯಾಗಿದೆ ಎಂದು ಉಲ್ಲೇಖಿಸಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿದ್ಯಾರ್ಥಿಗಳ ಕ್ಷೇಮಪಾಲನ ವಿಭಾಗದ ಮುಖ್ಯಸ್ಥೆ ಡಾ. ಪ್ರೀತಿ ಹರೀಶ್ ರಾಜ್ ಅವರು ಮಾತನಾಡಿ, ಎನ್. ಎಸ್. ಎಸ್. ಮೂಲಕ ವಿದ್ಯಾರ್ಥಿಗಳು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಂಡು ಜವಾಬ್ದಾರಿಯುತ ನಾಗರಿಕರಾಗುವುದಕ್ಕೆ ಸಾಧ್ಯವಿದೆ. ಆದ್ದರಿಂದ ಎಲ್ಲಾ ವಿದ್ಯಾರ್ಥಿಗಳು ಈ ಯೋಜನವೆಯಲ್ಲಿ ತೊಡಗಿಕೊಳ್ಳಬೇಕು ಎಂದರು.
ಎನ್. ಎಸ್. ಎಸ್. ಸಂಯೋಜನಾಧಿಕಾರಿಗಳಾದ ಡಾ. ನವೀನ್ ಚಂದ್ರ ಸಿ. ಬಿ. ಹಾಗೂ ಅಮೋಘ ಗಟ್ಕರ್, ಕಾಲೇಜಿನ ಬೋಧಕ ಸಿಬ್ಬಂದಿಗಳು ಉಪಸ್ಥಿತರಿದ್ದರು.ಎನ್. ಎಸ್. ಎಸ್. ಕಾರ್ಯದರ್ಶಿಗಳಾದ ಸಮೀರ್ ಸರ್ವರನ್ನು ಸ್ವಾಗತಿಸಿದರು, ಅಂಕಿತ ಧನ್ಯವಾದವಿತ್ತರು, ರಕ್ಷಿತಾ ಕಾರ್ಯಕ್ರಮ ನಿರೂಪಿಸಿದರು, ಸಂದೇಶ್ ಮತ್ತು ಎನ್. ಎಸ್. ಎಸ್. ಸ್ವಯಂಸೇವಕರು ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡರು.