ನಗರದ ಮಹಾತ್ಮಾ ಗಾಂಧಿ ಸ್ಮಾರಕ ಕಾಲೇಜಿನ ಸುಮಾರು 350 ವಿದ್ಯಾರ್ಥಿಗಳು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರ ಖೇಲೋ ಇಂಡಿಯಾ ಸಂವಾದದಲ್ಲಿ ಭಾಗವಹಿಸಿದರು.

ಉಡುಪಿ: ನಗರದ ಮಹಾತ್ಮಾ ಗಾಂಧಿ ಸ್ಮಾರಕ ಕಾಲೇಜಿನ ಸುಮಾರು 350 ವಿದ್ಯಾರ್ಥಿಗಳು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರ ಖೇಲೋ ಇಂಡಿಯಾ ಸಂವಾದದಲ್ಲಿ ಭಾಗವಹಿಸಿದರು.ಈ ಸಂವಾದಕ್ಕೆಎ ಕೆಟಗರಿಯಲ್ಲಿ ಆಯ್ಕೆಯಾದ ಉಡುಪಿ ಜಿಲ್ಲೆ ಹಾಗೂ ಮಂಗಳೂರು ವಿವಿಯ ಏಕೈಕ ರಾಷ್ಟ್ರೀಯ ಸೇವಾ ಯೋಜನೆ ವಿಭಾಗ ಎಂಬ ಹೆಗ್ಗಳಿಕೆಗೆ ಎಂಜಿಎಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಪಾತ್ರವಾಗಿದೆ.ಖೇಲೋ ಇಂಡಿಯಾ ಬಗ್ಗೆ ಪ್ರಧಾನಿ ಭಾಷಣ ಆಲಿಸಿದ ನಂತರ, ಉಡುಪಿಯ ರಾಷ್ಟ್ರಮಟ್ಟದ ಕ್ರೀಡಾಪಟು ಸ್ತುತಿ ಪಿ. ಶೆಟ್ಟಿ ಅವರೊಂದಿಗೆ ವಿದ್ಯಾರ್ಥಿಗಳು ಸಂವಾದ ನಡೆಸಿದರು. ನಂತರ ವಿದ್ಯಾರ್ಥಿಗಳು ನಶಾ ಮುಕ್ತ ಅಭಿಯಾನಯ ಪ್ರತಿಜ್ಞೆ ಸ್ವೀಕರಿಸಿದರು.

ಪ್ರಾಂಶುಪಾಲೆ ಡಾ.ಗಾಯತ್ರಿ ಪೈ, ಉಪಪ್ರಾಂಶುಪಾಲ ಡಾ. ಎಂ.ವಿಶ್ವನಾಥ ಪೈ, ಎನ್‌ಎಸ್‌ಎಸ್ ಅಧಿಕಾರಿಗಳಾದ ಸುಚಿತ್ ಕೋಟ್ಯಾನ್, ಡಾ.ರೇಖಾ ಎನ್‌.ಚಂದ್ರ, ಉಡುಪಿ ಮೈ ಭಾರತ್ ಕೇಂದ್ರದ ಶ್ಯಾಮಲಾ, ಎನ್‌ಐಸಿ ಉಡುಪಿಯ ಗೌತಮ್, ಕಾಲೇಜಿನ ಪ್ರಾಧ್ಯಾಪಕರು, ಎನ್‌ಎಸ್‌ಎಸ್ ಸ್ವಯಂಸೇವಕರು, ವಿದ್ಯಾರ್ಥಿಗಳು ಸಂವಾದದಲ್ಲಿ ಭಾಗವಹಿಸಿದರು. ವಿದ್ಯಾರ್ಥಿಗಳಾದ ಅನಘಾ ಮೇಲಂಟ, ಪ್ರಾಪ್ತಿ ಶೆಟ್ಟಿ ಹಾಗೂ ದೀಪಕ್ ಹೆಗ್ಡೆ ಸಂವಹನದ ನೇತೃತ್ವ ವಹಿಸಿದರು.