ಸಾರಾಂಶ
ಬ್ರಹ್ಮಾವರದ ಗ್ರಾಮೀಣಾಭಿವೃದ್ಧಿ ಮತ್ತು ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ವತಿಯಿಂದ 6 ದಿನಗಳ ಕಾಲ ಹಮ್ಮಿಕೊಂಡಿರುವ ಕೃತಕ ಆಭರಣ ತಯಾರಿಕೆ ತರಬೇತಿಯಲ್ಲಿ ಭಾಗವಹಿಸಿ ತರಬೇತಿ ಪಡೆದ ನಿವಾಸಿನಿಯರಿಗೆ ಪ್ರಮಾಣಪತ್ರ ವಿತರಿಸಲಾಯಿತು. ಸಂಸ್ಥೆಯ ನಿವಾಸಿಯರಿಗೆ ವಿವಿಧ ಸ್ಫರ್ಧೆಗಳನ್ನು ಆಯೋಜಿಸಿ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ನಗರದ ರಾಜ್ಯ ಮಹಿಳಾ ನಿಲಯ ಸಂಸ್ಥೆಯಲ್ಲಿ ವಿಶ್ವ ಮಹಿಳಾ ದಿನ ಇತ್ತೀಚೆಗೆ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲ ಸಿ.ಕೆ ವಹಿಸಿದ್ದರು. ಮಣಿಪಾಲ ಭಾರತೀಯ ವಿಕಾಸ ಟ್ರಸ್ಟ್ ಕಾರ್ಯಕ್ರಮ ಸಂಯೋಜಕಿ ಲಕ್ಷ್ಮೀಬಾಯಿ ಅವರು ಉಪನ್ಯಾಸ ನೀಡಿ, ಮಹಿಳಾ ಸಬಲೀಕರಣದ ಬಗ್ಗೆ ವಿವರಿಸಿದರು. ಇದೇ ಸಂದರ್ಭದಲ್ಲಿ ಬ್ರಹ್ಮಾವರದ ಗ್ರಾಮೀಣಾಭಿವೃದ್ಧಿ ಮತ್ತು ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ವತಿಯಿಂದ 6 ದಿನಗಳ ಕಾಲ ಹಮ್ಮಿಕೊಂಡಿರುವ ಕೃತಕ ಆಭರಣ ತಯಾರಿಕೆ ತರಬೇತಿಯಲ್ಲಿ ಭಾಗವಹಿಸಿ ತರಬೇತಿ ಪಡೆದ ನಿವಾಸಿನಿಯರಿಗೆ ಪ್ರಮಾಣಪತ್ರ ವಿತರಿಸಲಾಯಿತು. ಸಂಸ್ಥೆಯ ನಿವಾಸಿಯರಿಗೆ ವಿವಿಧ ಸ್ಫರ್ಧೆಗಳನ್ನು ಆಯೋಜಿಸಿ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ಲೀಡ್ ಬ್ಯಾಂಕ್ ಪ್ರಬಂಧಕ ಹರೀಶ್, ಬ್ರಹ್ಮಾವರದ ಗ್ರಾಮೀಣಾಭಿವೃದ್ಧಿ ಮತ್ತು ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕ ಲಕ್ಷ್ಮೀಶ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಅನುರಾಧಾ ಹಾದಿಮನಿ, ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟದ ಕಾರ್ಯದರ್ಶಿ ಪ್ರೇಮಾ, ಸಂಸ್ಥೆಯ ಅಧೀಕ್ಷಕಿ ಪುಷ್ಪಾರಾಣಿ ಎಚ್., ಸಂಸ್ಥೆಯ ಸಿಬ್ಬಂದಿಗಳಾದ ಸವಿತಾ, ಮಾಲಿನಿ ಹಾಗೂ ಪ್ರೀತಿ, ಸಂಸ್ಥೆಯ ನಿವಾಸಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.