ಉಡುಪಿ: ವಿಶ್ವ ಆರೈಕೆದಾರರ ದಿನಾಚರಣೆ

| Published : Oct 30 2025, 02:45 AM IST

ಸಾರಾಂಶ

ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಮತ್ತು ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರಗಳ ಸಹಯೋಗದಲ್ಲಿ ನಗರದ ಆಶಾ ನಿಲಯ ವಿಶೇಷ ಶಾಲೆಯಲ್ಲಿ ವಿಶ್ವ ಆರೈಕೆದಾರರ ದಿನ ಆಚರಿಸಲಾಯಿತು.

ಉಡುಪಿ: ಜಿಲ್ಲಾಡಳಿತದ ವತಿಯಿಂದ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಮತ್ತು ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರಗಳ ಸಹಯೋಗದಲ್ಲಿ ನಗರದ ಆಶಾ ನಿಲಯ ವಿಶೇಷ ಶಾಲೆಯಲ್ಲಿ ವಿಶ್ವ ಆರೈಕೆದಾರರ ದಿನ ಆಚರಿಸಲಾಯಿತು.

ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಸವರಾಜ ಹುಬ್ಬಳ್ಳಿ ಉದ್ಘಾಟಿಸಿ ಮಾತನಾಡಿ, ಆರೈಕೆದಾರರಿಗೆ ಸರಿಯಾದ ಮಾಹಿತಿ ನೀಡಿದಲ್ಲಿ ವಿಶೇಷಚೇತನರ ಬದುಕಿಗೆ ಬೆಳಕು ನೀಡಿದಂತಾಗುತ್ತದೆ ಎಂದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ. ಆರೈಕೆದಾರರಿಗಿರುವ ಪ್ರೋತ್ಸಾಹಧನದ ಬಗ್ಗೆ ಮಾಹಿತಿ ನೀಡಿದರು.

ಉಡುಪಿ ತಾಲೂಕು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತ ಮಧುಸೂಧನ್ ಇಲಾಖೆಯ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಬೆಂಗಳೂರು ಇದರ ನಿವೃತ್ತ ಸಹಾಯಕ ನಿರ್ದೇಶಕ ನಿರಂಜನ ಭಟ್ ಉಪನ್ಯಾಸ ನೀಡಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಇಲಾಖೆಯ ಕಲ್ಯಾಣಾಧಿಕಾರಿ ರತ್ನಾ ಸುವರ್ಣ, ಆಶಾ ನಿಲಯ ವಿಶೇಷ ಶಾಲೆಯ ಮುಖ್ಯೋಪಾಧ್ಯಾಯ ಯೂನಿಸ್ ಕ್ರಿಸ್ತಬೆಲ್ ಮತ್ತಿತರರು ಉಪಸ್ಥಿತರಿದ್ದರು.ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಸದಸ್ಯ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ನೋಡಲ್ ಅಧಿಕಾರಿ ಜಯಶ್ರೀ ವಂದಿಸಿದರು.