ಉಡುಪಿ: ವಿಶ್ವ ಪರಿಸರ ದಿನಾಚರಣೆ 2025 ಸಂಪನ್ನ

| Published : Jun 04 2025, 01:29 AM IST

ಸಾರಾಂಶ

ವಿಶ್ವ ಪರಿಸರ ದಿನಾಚರಣೆ- 2025 ರ ಅಂಗವಾಗಿ ‘ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವುದು’ ಎಂಬ ಶೀರ್ಷಿಕೆಯಡಿಯಲ್ಲಿ ಮಲ್ಪೆ ಬೀಚ್ ನಲ್ಲಿ ಸ್ವಚ್ಛತಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪ್ರಾದೇಶಿಕ ಕಚೇರಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಭಾರತ್ ಸ್ಕೌಟ್ ಆ್ಯಂಡ್ ಗೈಡ್ಸ್ ಮತ್ತು ಉದ್ದಿಮೆದಾರರ ಸಂಘ ಉಡುಪಿ ಇವುಗಳ ನೇತೃತ್ವದಲ್ಲಿ ವಿಶ್ವ ಪರಿಸರ ದಿನಾಚರಣೆ- 2025 ರ ಅಂಗವಾಗಿ ‘ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವುದು’ ಎಂಬ ಶೀರ್ಷಿಕೆಯಡಿಯಲ್ಲಿ ಮಲ್ಪೆ ಬೀಚ್ ನಲ್ಲಿ ಸ್ವಚ್ಛತಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.ಈ ಸಂದರ್ಭ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೀಶ್ ಪಿ.ಆರ್., ನಗರಸಭೆ ಆಯುಕ್ತ ಮಹೇಶ್, ಪರಿಸರ ಅಭಿಯಂತರರಾದ ರವಿಪ್ರಕಾಶ್, ಪರಿಸರ ಅಧಿಕಾರಿ ಕೆ.ಕೀರ್ತಿ ಕುಮಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ:

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಉಡುಪಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಇವರ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ-2025 ರ ಅಂಗವಾಗಿ ಶಾಲಾ ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆಯು ಮಂಗಳವಾರ ನಗರದ ಕೆ.ಎಂ.ಮಾರ್ಗದ ಸೈಂಟ್ ಮೇರೀಸ್ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆಯಿತು.

ಈ ಸಂದರ್ಭ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೀಶ್ ಪಿ.ಆರ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಅಶೋಕ್ ಕಾಮತ್, ಶಾಲಾ ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.