ಉಡುಪಿ: ಯಕ್ಷಶಿಕ್ಷಣ ಸನಿವಾಸ ಶಿಬಿರಕ್ಕೆ ಚಾಲನೆ

| Published : Mar 24 2025, 12:33 AM IST

ಸಾರಾಂಶ

ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಯಕ್ಷ ಶಿಕ್ಷಣ ಟ್ರಸ್ಟ್ ಉಡುಪಿ ವತಿಯಿಂದ, ಭೀಮ ಗೋಲ್ಡ್ ಪ್ರೈ. ಲಿ., ಬೆಂಗಳೂರು ಪ್ರಾಯೋಜಕತ್ವದಲ್ಲಿ ಆಯೋಜಿಸಲಾದ ಒಂದು ವಾರದ ಯಕ್ಷಶಿಕ್ಷಣ ಸನಿವಾಸ ಶಿಬಿರ - 2025 ನ್ನು ಶನಿವಾರ ಅಂಬಲಪಾಡಿ ದೇವಳದ ಧರ್ಮದರ್ಶಿಗಳಾದ ಡಾ. ನಿ. ಬೀ. ವಿಜಯ ಬಲ್ಲಾಳರು ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಯಕ್ಷ ಶಿಕ್ಷಣ ಟ್ರಸ್ಟ್ ಉಡುಪಿ ವತಿಯಿಂದ, ಭೀಮ ಗೋಲ್ಡ್ ಪ್ರೈ. ಲಿ., ಬೆಂಗಳೂರು ಇದರ ಪ್ರಾಯೋಜಕತ್ವದಲ್ಲಿ ನಡೆಯಲಿರುವ ಒಂದು ವಾರದ ಯಕ್ಷಶಿಕ್ಷಣ ಸನಿವಾಸ ಶಿಬಿರ - 2025 ನ್ನು ಶನಿವಾರ ಅಂಬಲಪಾಡಿ ದೇವಳದ ಧರ್ಮದರ್ಶಿಗಳಾದ ಡಾ. ನಿ. ಬೀ. ವಿಜಯ ಬಲ್ಲಾಳರು ಉದ್ಘಾಟಿಸಿದರು. ಅವರು ವಿದ್ಯಾರ್ಥಿಗಳನ್ನುದ್ದೇಶಿಸಿ ಯಕ್ಷಗಾನ ಶಿಕ್ಷಣ, ವಿದ್ಯಾರ್ಥಿಗಳ ಶೈಕ್ಷಣಿಕ ಕಲಿಕೆಗೆ ಪೂರಕವಾಗಿ ಧನಾತ್ಮಕ ಪರಿಣಾಮ ಬೀರುತ್ತದೆ, ಅದರ ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು.ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರು ಯಕ್ಷಗಾನ ಪರಿಪೂರ್ಣ ಕಲಾಪ್ರಕಾರವಾಗಿದ್ದು, ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಕಾರಣವಾಗುತ್ತದೆ ಎಂದರು. ಭೀಮ ಗೋಲ್ಡ್ ಪ್ರೈ. ಲಿ.ನ ರಾಘವೇಂದ್ರ ಭಟ್ ಹಾಗೂ ಗುರುಪ್ರಸಾದ್ ಅಭ್ಯಾಗತರಾಗಿ ಭಾಗವಹಿಸಿದ್ದರು. ಡಾ. ಕಾವ್ಯಾ ನರೇಂದ್ರ ಬಲ್ಲಾಳ, ಶಿಬಿರದ ನಿರ್ದೇಶಕ ಗುರು ಬನ್ನಂಜೆ ಸಂಜೀವ ಸುವರ್ಣ, ನರಸಿಂಹ ತುಂಗ, ಆದ್ಯತಾ ಭಟ್, ಎಸ್. ವಿ. ಭಟ್, ಯು. ವಿಶ್ವನಾಥ ಶೆಣೈ, ಯು.ಎಸ್. ರಾಜಗೋಪಾಲ ಆಚಾರ್ಯ, ಎಚ್. ಎನ್. ಶೃಂಗೇಶ್ವರ, ಭುವನಪ್ರಸಾದ ಹೆಗ್ಡೆ, ವಿದ್ಯಾ ಪ್ರಸಾದ್, ಅಜಿತ್ ಕುಮಾರ್, ಮಹೇಶ್ ಕುಮಾರ್, ರತ್ನಾಕರ ಶೆಣೈ, ನಿತ್ಯಾನಂದ ಶೆಟ್ಟಿಗಾರ್, ನಾಗೇಂದ್ರ ಗಾಣಿಗ ಉಪಸ್ಥಿತರಿದ್ದರು.ನಾರಾಯಣ ಎಂ. ಹೆಗಡೆ ಸ್ವಾಗತಿಸಿದರು. ಕಲಾರಂಗದ ಅಧ್ಯಕ್ಷರಾದ ಎಂ. ಗಂಗಾಧರ ರಾವ್ ವಂದಿಸಿದರು, ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಬಿರದ ಸಂಯೋಜಕರಾದ ನಿರಂಜನ ಭಟ್ ನಿರೂಪಿಸಿದರು. ಒಂದು ವಾರದ ಸನಿವಾಸ ಶಿಬಿರದಲ್ಲಿ ಯಕ್ಷಶಿಕ್ಷಣದ ಶಾಲೆಗಳ 60 ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದಾರೆ.