ಸಾರಾಂಶ
ಕನ್ನಡಪ್ರಭ ವಾರ್ತೆ ಬೆಳ್ತಂಗಡಿಮೆಲ್ಕಾರು ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಕೇಂದ್ರೀಯ ಸಮಿತಿಯ ತಿಂಗಳ ಸಭೆ ಶನಿವಾರ ಉಜಿರೆ ಶ್ರೀ ಶಾರದಾ ಮಂಟಪದಲ್ಲಿ ಪ್ರತಿಷ್ಠಾನ ಅಧ್ಯಕ್ಷ ಕಯ್ಯುರು ನಾರಾಯಣ ಭಟ್ ಅಧ್ಯಕ್ಷತೆಯಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಆ.17ರಂದು ಪುತ್ತೂರು ತಾಲೂಕು ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪ್ರತಿಷ್ಠಾನದ ಪುತ್ತೂರು ಘಟಕದ ಸಂಯೋಜನೆಯಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಕಾರ್ಯಾಗಾರದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು.
ಆ.17ರಂದು ಕಾರ್ಯಾಗಾರದಲ್ಲಿ 3 ಗೋಷ್ಠಿಗಳು ನಡೆಯಲಿದ್ದು, ಅದರಲ್ಲಿ ದಿನನಿತ್ಯದ ಆಹಾರದಲ್ಲಿ ಸಿರಿಧಾನ್ಯಗಳ ಬಳಕೆ ಮತ್ತು ಮಹತ್ವಗಳು, ಸಹಕಾರ ಸಂಘಗಳಿಂದ ದೊರಕುವ ಸೌಲಭ್ಯ ಮತ್ತು ವಿಮ ಯೋಜನೆಗಳ ಮಾಹಿತಿ ಹಾಗೂ ಸಾವಯವ ಕೃಷಿಯ ಮಾಹಿತಿ ಕುರಿತು ಸಂಪನ್ಮೂಲ ವ್ಯಕ್ತಿಗಳು ಮಾರ್ಗದರ್ಶನ ನೀಡಲಿದ್ದಾರೆ.ಪುತ್ತೂರು ಬೀರಮಲೆ ಬೆಟ್ಟದ ಪ್ರಜ್ಞಾ ಆಶ್ರಮಕ್ಕೆ ಗೌರವಾರ್ಪಣೆ ಹಾಗೂ ನಿವೃತ್ತ ಮುಖ್ಯಶಿಕ್ಷಕಿ ಶಂಕರಿ ಅವರ ಸನ್ಮಾನ ಮತ್ತು ಪ್ರತಿಷ್ಠಾನದ ಸದಸ್ಯರಿಂದ ‘ಶ್ರೀ ರಾಮ ದರ್ಶನ’ ಯಕ್ಷಗಾನ ತಾಳಮದ್ದಳೆ ನಡೆಯಲಿದೆ.ಕೇಂದ್ರ ಸಮಿತಿ ಉಪಾಧ್ಯಕ್ಷ ಜಯರಾಮ ಭಂಡಾರಿ, ಲೋಕೇಶ್ ಹೆಗ್ಡೆ, ಕೋಶಾಧಿಕಾರಿ ಕೃಷ್ಣ ಶರ್ಮ, ಬಿ.ಭುಜಬಲಿ ಧರ್ಮಸ್ಥಳ, ಪುತ್ತೂರು ಘಟಕ ಅಧ್ಯಕ್ಷ ಚಂದ್ರಶೇಖರ ಆಳ್ವ, ಸಂಚಾಲಕ ಭವಾನಿಶಂಕರ ಶೆಟ್ಟಿ, ಪದ್ಯಾಣ ಕೇಶವ ಭಟ್, ಗುಂಡ್ಯಡ್ಕ ಈಶ್ವರ ಭಟ್, ನಾಣ್ಯಪ್ಪ ನಾಯ್ಕ್, ದಿನೇಶ್ ಗೌಡ, ಉದಯಶಂಕರ ರೈ, ರವೀಂದ್ರ ಶೆಟ್ಟಿ ಬಳಂಜ, ವಿಶ್ವಾಸ್ ರಾವ್, ಬಿ.ಕುಸುಮಾವತಿ, ಗೋಪಾಲಕೃಷ್ಣ ಕಾಂಚೋಡು, ಗಣೇಶ್ ಭಟ್, ವೇದವ್ಯಾಸ ರಾಮಕುಂಜ, ಎಂ.ವಿಶ್ವನಾಥ ಶೆಟ್ಟಿ, ಸಾಂತೂರು ಶ್ರೀನಿವಾಸ ತಂತ್ರಿ ಮೊದಲಾದವರು ಭಾಗವಹಿಸಿ ತಮ್ಮ ಅನಿಸಿಕೆ, ಅಭಿಪ್ರಾಯ ವ್ಯಕ್ತಪಡಿಸಿದರು.
ಜಿಲ್ಲಾ ಸಂಚಾಲಕ ಭಾಸ್ಕರ ಬಾರ್ಯ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ಮತ್ತು ಬೆಳ್ತಂಗಡಿ ಘಟಕದ ಕಾರ್ಯದರ್ಶಿ ಗಣೇಶ್ ಭಟ್ ನಿರೂಪಿಸಿದರು. ಬೆಳ್ತಂಗಡಿ ಘಟಕ ಅಧ್ಯಕ್ಷ ಸೀತಾರಾಮ ಶೆಟ್ಟಿ ಕೇಂಬರ್ಜೆ ವಂದಿಸಿದರು.