ಸಾರಾಂಶ
ಅಧ್ಯಕ್ಷತೆ ವಹಿಸಿದ್ದ ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಪಿ.ವಿಜಯ ಕುಮಾರ್ ಮಾತನಾಡಿ, ಸರ್ಕಾರ ಮತ್ತು ಬ್ಯಾಂಕ್ ಹೊಸ ಯೋಜನೆಯ ಮೂಲಕ ಸಹಾಯಧನ, ಸಾಲ ಪಡೆದುಕೊಂಡು ಉದ್ಯಮ ಆರಂಭಿಸಿ, ಏನಾದರೂ ಮಾಹಿತಿ, ಮಾರ್ಗದರ್ಶನ ಬೇಕಾದರೆ ಸಂಸ್ಥೆಯನ್ನು ಸಂಪರ್ಕಿಸಿ ಎಂದರು.
ಕನ್ನಡಪ್ರಭ ವಾರ್ತೆ ಬೆಳ್ತಂಗಡಿ
ಇನ್ನೊಬ್ಬರನ್ನು ತುಳಿದು ಬದುಕು ಸಾಮರ್ಥ್ಯ ವ್ಯರ್ಥ. ಆದರೆ ಇನ್ನೊಬ್ಬರನ್ನು ಅರಿತು ಜೊತೆಯಾಗಿ ಬದುಕಿ ಬಾಳುವುದು ಸಾಮರ್ಥ್ಯ ಎಂದು ಧರ್ಮಸ್ಥಳದ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಪರಿಮಳ ಅಭಿಪ್ರಾಯಪಟ್ಟಿದ್ದಾರೆ.ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ 30 ದಿನಗಳ ಕಾಲ ನಡೆದೆ ವಸ್ತ್ರ ವಿನ್ಯಾಸ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ, ಪ್ರಮಾಣ ಪತ್ರ ವಿತರಿಸಿ ಅವರು ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಪಿ.ವಿಜಯ ಕುಮಾರ್ ಮಾತನಾಡಿ, ಸರ್ಕಾರ ಮತ್ತು ಬ್ಯಾಂಕ್ ಹೊಸ ಯೋಜನೆಯ ಮೂಲಕ ಸಹಾಯಧನ, ಸಾಲ ಪಡೆದುಕೊಂಡು ಉದ್ಯಮ ಆರಂಭಿಸಿ, ಏನಾದರೂ ಮಾಹಿತಿ, ಮಾರ್ಗದರ್ಶನ ಬೇಕಾದರೆ ಸಂಸ್ಥೆಯನ್ನು ಸಂಪರ್ಕಿಸಿ ಎಂದರು.ರುಡ್ ಸೆಟ್ ನಿರ್ದೇಶಕ ಅಜೇಯ ಸ್ವಾಗತಿಸಿದರು. ಸಂಸ್ಥೆಯ ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ನಿರೂಪಿಸಿದರು. ಉಪನ್ಯಾಸಕ ಕೆ.ಕರುಣಾಕರ ಜೈನ್ ವಂದಿಸಿದರು. ಸುಮಾರು 33 ಜನ ಶಿಬಿರಾರ್ಥಿಗಳ ಭಾಗವಹಿಸಿದ್ದರು. ದೀಪ್ತಿ, ಪೂರ್ಣಿಮಾ, ಸ್ವಾತಿ, ಲಾವಣ್ಯ ಪ್ರಾರ್ಥನೆ ಮಾಡಿದರು. ಮೋನಿಕಾ, ಪುಣ್ಯಶ್ರೀ , ಯಾಮಿನಿ ತರಬೇತಿಯ ಅನುಭವ ಹಂಚಿಕೊಂಡರು.