ಬೆಳ್ತಂಗಡಿ: ಒಡಿಶಾದ ಭುವನೇಶ್ವರದಲ್ಲಿ ಮಾ. 15ರಿಂದ 20ರವರೆಗೆ ನಡೆದ ಪುರುಷರ ಮತ್ತು ಮಹಿಳೆಯರ 26ನೇ ಯುವ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ 11 ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿ ಉತ್ತಮ ಸಾಧನೆ ಮೆರೆದಿದ್ದಾರೆ.
ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಉಜಿರೆ ಎಸ್ ಡಿಎಂ ಕ್ರೀಡಾ ಸಂಘದ ವಿದ್ಯಾರ್ಥಿಗಳು, ಪುರುಷ ತಂಡದಲ್ಲಿ ಕಾಲೇಜಿನ ದ್ವಿತೀಯ ಬಿಎ ವಿದ್ಯಾರ್ಥಿ ಸುಭಾಷ್ ರಾಜ್, ದ್ವಿತೀಯ ಬಿಕಾಂ ವಿದ್ಯಾರ್ಥಿ ಮಯೂರ್ ಹಾಗೂ ಪ್ರತೀಕ್ ಪಾಲ್ಗೊಂಡಿದ್ದರು. ಮಹಿಳೆಯರ ವಿಭಾಗದ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕಾಲೇಜಿನ ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿನಿ ಲಾಸ್ಯ, ಅಪೂರ್ವ, ಸ್ಮಿತಾ, ವರ್ಷಾ , ಜೆಸ್ಲಿನ್, ದ್ವಿತೀಯ ಬಿಎ ವಿದ್ಯಾರ್ಥಿನಿ ಪ್ರಿಯಾಂಕಾ, ದ್ವಿತೀಯ ಬಿಕಾಂ ವಿದ್ಯಾರ್ಥಿನಿ ಇಂಚರ ಹಾಗೂ ತೃತೀಯ ಬಿಎ ವಿದ್ಯಾರ್ಥಿನಿ ಐಶ್ವರ್ಯ ಭಾಗವಹಿಸಿದ್ದರು. ಇವರಿಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸುದೀನ್ ಪುಜಾರಿ ತರಬೇತಿ ನೀಡಿದ್ದಾರೆ. ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ವಿಶೇಷ ಸಾಧನೆ ಮೆರೆದಿರುವ ವಿದ್ಯಾರ್ಥಿಗಳಿಗೆ ಎಸ್ ಡಿಎಂ ಆಡಳಿತ ಮಂಡಳಿ ಹಾಗೂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್., ಐಟಿ ಮತ್ತು ಹಾಸ್ಟೆಲ್ ಆಡಳಿತ ವಿಭಾಗದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪೂರನ್ ವರ್ಮ, ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ್ ಪಿ, ಎಸ್ ಡಿಎಂ ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್ ಬಿ., ದೈಹಿಕ ಶಿಕ್ಷಣ ಉಪನ್ಯಾಸಕರಾದ ಶಾರದಾ, ಸುದೀನ್ ಪೂಜಾರಿ, ಸಂದೇಶ್ ಬಿ. ಪೂಂಜ, ಕಾಲೇಜಿನ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಸೇರಿದಂತೆ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.ವಾಲಿಬಾಲ್ ಚಾಂಪಿಯನ್ಶಿಪ್: ಉಜಿರೆ ಎಸ್ಡಿಎಂ ಕಾಲೇಜಿನ 11 ವಿದ್ಯಾರ್ಥಿಗಳ ಉತ್ತಮ ಸಾಧನೆ
: ಒಡಿಶಾದ ಭುವನೇಶ್ವರದಲ್ಲಿ ಮಾ. 15ರಿಂದ 20ರವರೆಗೆ ನಡೆದ ಪುರುಷರ ಮತ್ತು ಮಹಿಳೆಯರ 26ನೇ ಯುವ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ 11 ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿ ಉತ್ತಮ ಸಾಧನೆ ಮೆರೆದಿದ್ದಾರೆ.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.