ಪತ್ರಕರ್ತರ ಸಂಘ ಉಳ್ಳಾಲ ತಾಲೂಕು ಘಟಕದ 2026-29ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಚೆಂಬುಗುಡ್ಡೆ ತೊಕ್ಕೊಟ್ಟು ಸೇವಾಸೌಧದಲ್ಲಿ ನೆರವೇರಿತು.

ಉಳ್ಳಾಲ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಉಳ್ಳಾಲ ತಾಲೂಕು ಘಟಕದ 2026-29ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಬುಧವಾರ ಚೆಂಬುಗುಡ್ಡೆ ತೊಕ್ಕೊಟ್ಟು ಸೇವಾಸೌಧದಲ್ಲಿ ನೆರವೇರಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಪುಷ್ಪರಾಜ್ ಬಿ.ಎನ್ ಅವರು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಹಿರಿಯ ಸಾಹಿತಿ ಹಾಗೂ ನಿವೃತ್ತ ಉಪನ್ಯಾಸಕರಾದ ಕೆ.ಟಿ. ಆಳ್ವ ಅವರು ಭಾಗವಹಿಸಿ, ಪತ್ರಕರ್ತರು ಸಮಾಜದ ಕಣ್ಣಾಗಿದ್ದು ನಿಷ್ಪಕ್ಷಪಾತ ಹಾಗೂ ಜವಾಬ್ದಾರಿಯುತ ಪತ್ರಿಕೋದ್ಯಮದ ಮೂಲಕ ಸಮಾಜಕ್ಕೆ ದಿಕ್ಕು ತೋರಿಸುವ ಕೆಲಸ ಮಾಡಬೇಕು ಎಂದು ಹೇಳಿದರು.ಅತಿಥಿಗಳಾಗಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಶ್ರೀನಿವಾಸ್ ನಾಯಕ್ ಇಂದಾಜೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಪೂಜಾರಿ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿವೃತ್ತ ಯೋಜನಾಧಿಕಾರಿ ಮಂಜುಳಾ ಗುಡ್ಡೆಹಿಟ್ಟು, ಜಮಾತೆ ಇಸ್ಲಾಮಿ ಹಿಂದ್ ಜಿಲ್ಲಾಧ್ಯಕ್ಷರಾದ ಜ. ಅಬ್ದುಲ್ ಕರೀಮ್, ತೋಟಗಾರಿಕಾ ಇಲಾಖೆಯ ನಿವೃತ್ತ ಸಿಬ್ಬಂದಿ ಸಿರಿಲ್‌ ರಾಬರ್ಟ್‌ ಡಿಸೋಜ ಉಪಸ್ಥಿತರಿದ್ದರು.ನೂತನ ಪದಾಧಿಕಾರಿಗಳಾಗಿ ಅಧ್ಯಕ್ಷರಾಗಿ ಶಶಿಧರ್ ಪೊಯ್ಯತ್ತಬೈಲು, ಪ್ರಧಾನ ಕಾರ್ಯದರ್ಶಿಯಾಗಿ ದಿನೇಶ್ ನಾಯಕ್, ಕೋಶಾಧಿಕಾರಿಯಾಗಿ ವಜ್ರ ಗುಜರನ್, ಉಪಾಧ್ಯಕ್ಷರಾಗಿ ಸತೀಶ್ ಪುಂಡಿಕಾಯಿ ಮತ್ತು ಆಸೀಫ್ ಬಬ್ಬುಕಟ್ಟೆ, ಕಾರ್ಯದರ್ಶಿಗಳಾಗಿ ಸತೀಶ್ ಕೊಣಾಜೆ ಹಾಗೂ ಬಶೀರ್ ಕಲ್ಕಟ್ಟ, ಸದಸ್ಯರಾಗಿ ವಸಂತ್ ಎನ್. ಕೊಣಾಜೆ, ಮೋಹನ್ ಕುತ್ತಾರು, ಶಿವಶಂಕರ್ ಎಮ್., ರಜನಿಕಾಂತ್ ಸಿ ಹಾಗೂ ಗಣೇಶ್ ತಲಪಾಡಿ ಅವರು ಪದಗ್ರಹಣ ಮಾಡಿದರು.ಈ ಸಂದರ್ಭ ನಿಕಟಪೂರ್ವ ಅಧ್ಯಕ್ಷ ವಸಂತ್‌ ಎನ್‌ ಕೊಣಾಜೆ ಇವರಿಂದ ಶಶಿಧರ್‌ ಪೊಯ್ಯತ್ತಬೈಲ್‌ ಅಧಿಕಾರ ಹಸ್ತಾಂತರ ನಡೆಯಿತು. ಈ ವೇಳೆ ಹಿರಿಯ ಸಾಹಿತಿ ಹಾಗೂ ನಿವೃತ್ತ ಉಪನ್ಯಾಸಕರಾದ ಕೆ.ಟಿ. ಆಳ್ವ, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಶ್ರೀನಿವಾಸ್ ನಾಯಕ್ ಇಂದಾಜೆ, ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಪುಷ್ಪರಾಜ್ ಬಿ.ಎನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಪೂಜಾರಿ, ಉಳ್ಳಾಲ ತಾಲೂಕು ಅಧ್ಯಕ್ಷ ಶಶಿಧರ್‌ ಪೊಯ್ಯತ್ತಬೈಲ್‌, ಪ್ರಧಾನ ಕಾರ್ಯದರ್ಶಿ ದಿನೇಶ್‌ ನಾಯಕ್‌ ಇವರನ್ನು ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಘದ ಜಿಲ್ಲಾ ಮಾಜಿ ಉಪಾಧ್ಯಕ್ಷ ಅನ್ಸಾರ್‌ ಇನೋಳಿ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಆರೀಫ್‌ ಕಲ್ಕಟ್ಟ, ಸದಸ್ಯರುಗಳಾದ ಸುಪ್ರೀತ್‌ ಇರಾ, ಅಶ್ವಿನ್‌ ಕುತ್ತಾರ್‌, ಗಂಗಾಧರ್‌ ಕೊಣಾಜೆ, ಅಭಿಷೇಕ್‌ ಅಸೈಗೋಳಿ, ಸುಷ್ಮಿತಾ ಸಾಮಾಣಿ ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಸಂಘದ ಮುಂದಿನ ಅವಧಿಯ ಕಾರ್ಯಯೋಜನೆಗಳ ಕುರಿತು ಚರ್ಚೆ ನಡೆಯಿತು. ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಸಂಕಲ್ಪವನ್ನು ಪದಾಧಿಕಾರಿಗಳು ವ್ಯಕ್ತಪಡಿಸಿದರು.ಸಮಾರಂಭದಲ್ಲಿ ಪತ್ರಕರ್ತರು ಹಾಗೂ ಗಣ್ಯರು ಉಪಸ್ಥಿತರಿದ್ದು, ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.