ಇನೋಳಿಯಲ್ಲಿ ಬ್ಯಾರೀಸ್ ನಾಲೆಡ್ಜ್ ಕ್ಯಾಂಪಸ್ ನಲ್ಲಿ ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (BIT), ಬ್ಯಾರೀಸ್ ಎನ್ವಿರೋ-ಆರ್ಕಿಟೆಕ್ಚರ್ ಡಿಸೈನ್ ಸ್ಕೂಲ್ (BEADS), ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಎಮರ್ಜಿಂಗ್ ಸೈನ್ಸ್ (BIES) ಹಾಗೂ ಬ್ಯಾರೀಸ್ ಪಾಲಿಟೆಕ್ನಿಕ್ ಸಂಸ್ಥೆಗಳ 2026ರ ಪದವಿ ಪ್ರದಾನ ಸಮಾರಂಭ
ಉಳ್ಳಾಲ: ತಂತ್ರಜ್ಞಾನದೊಂದಿಗೆ ಕೈಗಾರಿಕಾ ಕ್ರಾಂತಿಯು ಹಂತ ಹಂತವಾಗಿ ಸಮಾಜಕ್ಕೆ ಪೂರಕವಾಗಿ ಬೆಳೆಯತ್ತಾ ಬಂದಿದೆ. ಆದರೆ ಇತ್ತೀಚಿನ ಕಾಲಘಟ್ಟದಲ್ಲಿ ಕೃತಕ ಬುದ್ಧಿಮತ್ತೆ, ಆಧುನಿಕ ಡಿಜಿಟಲ್ ತಂತ್ರಜ್ಞಾನಗಳು ಅನೇಕ ಸವಾಲಿನ ಜೊತೆಗೆ ಅವಕಾಶಗಳನ್ನೂ ನಮ್ಮ ಮುಂದೆ ತೆರೆದಿಟ್ಟಿದ್ದು, ವಿದ್ಯಾರ್ಥಿಗಳು, ಯುವ ಸಮುದಾಯ ಜ್ಞಾನ , ಕೌಶಲ್ಯ, ಪರಿಶ್ರಮದೊಂದಿಗೆ ಮುನ್ನಡೆದರೆ ಜೀವನದಲ್ಲಿ ಯಶಸ್ಸುಗಳಿಸಲು ಸಾಧ್ಯ ಎಂದು ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಇಂಟರ್ಡಿಸಿಪ್ಲಿನರಿ ಸೆಂಟರ್ ಫಾರ್ ಎನರ್ಜಿ ರಿಸರ್ಚ್ನ ಅಧ್ಯಕ್ಷ ಹಾಗೂ ಪ್ರಾಧ್ಯಾಪಕ ಡಾ. ಪ್ರಮೋದ್ ಕುಮಾರ್ ಹೇಳಿದರು.ಅವರು ಇನೋಳಿಯಲ್ಲಿ ಬ್ಯಾರೀಸ್ ನಾಲೆಡ್ಜ್ ಕ್ಯಾಂಪಸ್ ನಲ್ಲಿ ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (BIT), ಬ್ಯಾರೀಸ್ ಎನ್ವಿರೋ-ಆರ್ಕಿಟೆಕ್ಚರ್ ಡಿಸೈನ್ ಸ್ಕೂಲ್ (BEADS), ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಎಮರ್ಜಿಂಗ್ ಸೈನ್ಸ್ (BIES) ಹಾಗೂ ಬ್ಯಾರೀಸ್ ಪಾಲಿಟೆಕ್ನಿಕ್ ಸಂಸ್ಥೆಗಳ 2026ರ ಪದವಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (NITK), ಸುರತ್ಕಲ್ನ ನಿರ್ದೇಶಕರಾದ ಪ್ರೊ. ಬಿ. ರವಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು. ಚೆನ್ನೈನ ಬಿ. ಎಸ್. ಅಬ್ದುರ್ ರಹಮಾನ್ ಕ್ರೆಸೆಂಟ್ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆಯ ಸೆಂಟರ್ ಆಫ್ ಎಕ್ಸಲೆನ್ಸ್ ಫಾರ್ ಬಿಲ್ಟ್ ಎನ್ವಿರಾನ್ಮೆಂಟ್ನ ನಿರ್ದೇಶಕರಾದ ಪ್ರೊ. ಜಾಫರ್ ಎ. ಎ. ಖಾನ್ ಅವರು ಗೌರವ ಅತಿಥಿಗಳಾಗಿ ಮಾತನಾಡಿದರು.ಬ್ಯಾರೀಸ್ ಅಕಾಡೆಮಿ ಆಫ್ ಲರ್ನಿಂಗ್ನ ಅಧ್ಯಕ್ಷರಾದ ಸಯ್ಯದ್ ಮೊಹಮ್ಮದ್ ಬ್ಯಾರಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬ್ಯಾರೀಸ್ ಸಮೂಹ ಸಂಸ್ಥೆಯ ಟ್ರಸ್ಟಿಗಳಾದ ಅಬ್ದುಲ್ ರಹಿಮಾನ್ ಬ್ಯಾರಿ, ಡಾ. ಆಸೀಫ್ ಬ್ಯಾರಿ, ಬ್ಯಾರೀಸ್ ನಾಲೆಡ್ಜ್ ಕ್ಯಾಂಪಸ್ನ ನಿರ್ದೇಶಕರಾದ ಡಾ. ಎಸ್. ಐ. ಮಂಜೂರ್ ಬಾಷಾ, ಬಿಐಟಿ ಪ್ರಾಂಶುಪಾಲರಾದ ಡಾ. ಕಮಲಕಣ್ಣನ್ ಸಿ., ಬಿಐಟಿ ಪಾಲಿಟೆಕ್ನಿಕ್ನ ನಿರ್ದೇಶಕರಾದ ಪ್ರೊ. ಪೃಥ್ವಿರಾಜ್, ಬಿಐಇಎಸ್ ನ ಪ್ರಾಂಶುಪಾಲರಾದ ಡಾ. ಅಜೀಜ್ ಮುಸ್ತಫಾ ಹಾಗೂ ಬೀಡ್ಸ್ (BEADS) ವಿಭಾಗದ ಮುಖ್ಯಸ್ಥರಾದ ಆರ್ಕಿಟೆಕ್ಟ್ ನಜೀದ್ ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರು ಭಾಗವಹಿಸಿದ್ದರು.ಬ್ಯಾರೀಸ್ ನಾಲೆಡ್ಜ್ ಕ್ಯಾಂಪಸ್ನ ನಿರ್ದೇಶಕರಾದ ಡಾ. ಎಸ್. ಐ. ಮಂಜೂರ್ ಬಾಷಾ ಸ್ವಾಗತಿಸಿದರು. ಬಿಐಟಿ ಪ್ರಾಂಶುಪಾಲರಾದ ಡಾ. ಕಮಲಕಣ್ಣನ್ ಸಿ ವಂದಿಸಿದರು. ಪ್ರೊ.ಜಾಯ್ಸನ್ ಕಾರ್ಯಕ್ರಮ ನಿರೂಪಿಸಿದರು
ಕಾರ್ಯಕ್ರಮದಲ್ಲಿ ಎಂಜಿನಿಯರಿಂಗ್, ವಾಸ್ತುಶಿಲ್ಪ, ವಿಜ್ಞಾನ ಹಾಗೂ ಪಾಲಿಟೆಕ್ನಿಕ್ ವಿಭಾಗಗಳ ಪದವಿ ಮತ್ತು ಸ್ನಾತಕೋತ್ತರ ಪದವೀಧರರಿಗೆ ಪದವಿ ಪ್ರಮಾಣಪತ್ರಗಳನ್ನು ಪ್ರದಾನ ಮಾಡಲಾಯಿತು ಹಾಗೂ ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.ಡ್ರೋನ್ ತಂತ್ರಜ್ಞಾನ ಉತ್ಕೃಷ್ಟತಾ ಕೇಂದ್ರ ಉದ್ಘಾಟನೆ: ಇದೇ ಸಂದರ್ಭದಲ್ಲಿ ನಾವೀನ್ಯತೆ, ಉದ್ಯಮಶೀಲತೆ, ಸಂಶೋಧನೆ ಹಾಗೂ ತಂತ್ರಜ್ಞಾನ ಆಧಾರಿತ ನವೋದ್ಯಮಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಸ್ಥಾಪಿಸಲಾದ ಬ್ಯಾರೀಸ್ ಸೆಂಟರ್ ಫಾರ್ ಇನ್ನೋವೇಶನ್ ಆ್ಯಂಡ್ ಇನ್ಕ್ಯುಬೇಶನ್ ಉದ್ಘಾಟನೆಗೊಂಡಿತು. ಅಲ್ಲದೆ
ಇದರೊಂದಿಗೆ ಮಾನವರಹಿತ ವೈಮಾನಿಕ ವಾಹನಗಳ (UAV) ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರಾಯೋಗಿಕ ತರಬೇತಿ, ತಾಂತ್ರಿಕ ಶಿಕ್ಷಣ, ಮಾದರಿ ವಿನ್ಯಾಸ ಮತ್ತು ಅಭಿವೃದ್ಧಿ, ಸಂಶೋಧನೆ ಹಾಗೂ ಉದ್ಯಮಶೀಲ ಚಟುವಟಿಕೆಗಳಿಗೆ ಪೂರಕವಾಗಿ ನಿರ್ಮಾಣಗೊಂಡ ಡ್ರೋನ್ ತಂತ್ರಜ್ಞಾನ ಉತ್ಕೃಷ್ಟತಾ ಕೇಂದ್ರ ಮತ್ತು ಪ್ರೊಟೊಟೈಪಿಂಗ್ ಪ್ರಯೋಗಾಲಯವನ್ನು ಉದ್ಘಾಟಿಸಲಾಯಿತು.