ಉಳ್ಳಾಲ ನಗರಸಭೆ: ಶಶಿಕಲಾ ಅಧ್ಯಕ್ಷೆ, ಸಪ್ನಾ ಹರೀಶ್‌ ಉಪಾಧ್ಯಕ್ಷೆ

| Published : Aug 30 2024, 01:11 AM IST

ಸಾರಾಂಶ

ಉಳ್ಳಾಲ ನಗರ ಸಭೆ ಅಧ್ಯಕ್ಷ ಸ್ಥಾನಕ್ಕೆ ಎಸ್‌ಸಿ, ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗದ ಎ ಮಹಿಳೆಗೆ ಮೀಸಲಾತಿ ಪ್ರಕಟವಾಗಿತ್ತು.

ಉಳ್ಳಾಲ: ಉಳ್ಳಾಲ ನಗರ ಸಭೆಯ ಎರಡನೇ ಹಂತದ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಶಶಿಕಲಾ, ಉಪಾಧ್ಯಕ್ಷರಾಗಿ ಸಪ್ನಾ ಹರೀಶ್ ಆಯ್ಕೆಯಾದರು.

ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಶಶಿಕಲಾ, ಬಿಜೆಪಿಯಿಂದ ಭವಾನಿ, ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಸಪ್ನಾ ಹರೀಶ್, ಬಿಜೆಪಿಯಿಂದ ನಮಿತ, ಎಸ್‌ಡಿಪಿಐನಿಂದ ಝರೀನಾ ರವೂಫ್ ನಾಮಪತ್ರ ಸಲ್ಲಿಸಿದ್ದರು. ಶಶಿಕಲಾ ಅವರು 23 ಮತಗಳನ್ನು ಪಡೆದು ಗೆಲುವು ಪಡೆದು ಅಧ್ಯಕ್ಷರಾಗಿ ಚುನಾಯಿತರಾದರು. ಬಿಜೆಪಿಯ ಭವಾನಿ ಪರ 6 ಮತ ಚಲಾವಣೆಯಾಗಿದ್ದವು.

ಉಪಾಧ್ಯಕ್ಷ ಸ್ಥಾನಕ್ಕೆ ಸಪ್ನಾ ಹರೀಶ್ 17 ಮತಗಳೊಂದಿಗೆ ಜಯಗಳಿಸಿದರು. ಝರೀನಾ ರವೂಫ್ ಪರ 6, ಬಿಜೆಪಿಯ ನಮಿತಾ ಪರ 6 ಮತಗಳು ಚಲಾವಣೆ ಆಗಿದ್ದವು. ಉಳ್ಳಾಲ ನಗರ ಸಭೆಯ ಒಟ್ಟು 31 ಸ್ಥಾನ ಗಳ ಪೈಕಿ ಕಾಂಗ್ರೆಸ್ 13, ಬಿಜೆಪಿ 6, ಜೆಡಿಎಸ್ 4, ಎಸ್ ಡಿಪಿಐ 6 ಹಾಗೂ ಇಬ್ಬರು ಪಕ್ಷೇತರರು ಸ್ಥಾನ ಪಡೆದಿದ್ದಾರೆ. ಸಹಾಯಕ ಆಯುಕ್ತ ಹರ್ಷವರ್ಧನ್ ಚುನಾವಣೆ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು.

ಉಳ್ಳಾಲ ನಗರ ಸಭೆ ಅಧ್ಯಕ್ಷ ಸ್ಥಾನಕ್ಕೆ ಎಸ್‌ಸಿ, ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗದ ಎ ಮಹಿಳೆಗೆ ಮೀಸಲಾತಿ ಪ್ರಕಟವಾಗಿತ್ತು.