ಅಪಘಾತದಲ್ಲಿ ಮೃತಪಟ್ಟ ಕುಟುಂಬಕ್ಕೆ ಸಾಂತ್ವನ ಹೇಳಿದ ಉಮೇಶ್

| Published : Apr 23 2025, 02:07 AM IST

ಅಪಘಾತದಲ್ಲಿ ಮೃತಪಟ್ಟ ಕುಟುಂಬಕ್ಕೆ ಸಾಂತ್ವನ ಹೇಳಿದ ಉಮೇಶ್
Share this Article
  • FB
  • TW
  • Linkdin
  • Email

ಸಾರಾಂಶ

Umesh consoled the family who died in the accident

ಯಾದಗಿರಿ: ಕಳೆದ ವಾರ ಶಹಾಪೂರ ತಾಲೂಕಿನ ಮದ್ದರಕಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳ ಮನೆಗೆ ಭೇಟಿ ನೀಡಿದ ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ್ ಮುದ್ನಾಳ್ ಸಾಂತ್ವನ ನೀಡಿದರು. ಮದ್ದರಕಿ ಬಳಿ ನಡೆದ ಭೀಕರ ಅಪಘಾತದಲ್ಲಿ ಒಂದೇ ಗ್ರಾಮದ ಏಳು ಜನರು ಮೃತಪಟ್ಟಿದು ತೀವ್ರ ಬೇಸರದ ಸಂಗತಿ ಎಂದು ಬೇಸರ ಹೊರ ಹಾಕಿದ್ದರು.ಯಾದಗಿರಿ ತಾಲೂಕಿನ ವರ್ಕನಳ್ಳಿ ಗ್ರಾಮದವರಾಗಿದ್ದ ಮೃತರು ಜವಳಕ್ಕೆಂದು ಘತ್ತರಗಿ ಭಾಗಮ್ಮ ದೇವಸ್ಥಾನಕ್ಕೆ ಹೊರಟ್ಟಿದ್ದರು. ಈ ವೇಳೆ ಘೋರ ದುರಂತ ಸಂಭವಿಸಿದೆ. ಆದರೂ ಸಹ ಜಿಲ್ಲಾಡಳಿತ ಹಾಗೂ ಸಚಿವರು, ಶಾಸಕರು ಸೌಜನ್ಯಕ್ಕಾದರೂ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿಲ್ಲ‌‌. ಇದು ದುರದೃಷ್ಟಕರ ಸಂಗತಿ ಎಂದು ಬೇಸರ ಹೊರ ಹಾಕಿದ್ದರು.ಸರ್ಕಾರ ರಸ್ತೆ ಅಪಘಾತದಲ್ಲಿ ‌ಮೃತಪಟ್ಟ ಕುಟುಂಬಸ್ಥರಿಗೆ ತಲಾ 10 ಲಕ್ಷ ಪರಿಹಾರ ನೀಡುವಂತೆ ಆಗ್ರಹಿಸಿದ್ದರು. ಜೊತೆಗೆ ‌ಅವರ ಕುಟುಂಬದಲ್ಲಿ ವಿದ್ಯಾವಂತರಿಗೆ ಹೊರಗುತ್ತಿಗೆ ಆಧಾರದ ಮೇಲಾದರೂ ನೌಕರಿ ಕೊಡಬೇಕು. ಮಕ್ಕಳ ವಿದ್ಯಾಭ್ಯಾಸದ ಜವಾಬ್ದಾರಿ ಸರ್ಕಾರವೇ ಹೊರಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದ್ದರು. ಈ ಸಂದರ್ಭದಲ್ಲಿ ಊರಿನ ಮುಖಂಡರು ಹಾಗೂ ಮೃತ ದುರ್ದೈವಿಗಳ ಏಳು ಕುಟುಂಬ ಸದಸ್ಯರು ಇದ್ದರು.

-

22ವೈಡಿಆರ್‌14 : ಮದ್ದರಕಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳ ಮನೆಗೆ ಭೇಟಿ ನೀಡಿದ ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ್ ಮುದ್ನಾಳ್ ಸಾಂತ್ವನ ಹೇಳಿದರು.