ಸಾಲದ ಬಾಧೆ ತಾಳದೇ ರೈತ ಆತ್ಮಹತ್ಯೆ

| Published : Sep 12 2025, 12:06 AM IST

ಸಾರಾಂಶ

ಸಾಲ ಬಾಧೆ ತಾಳಲಾರದೆ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಂಡರಗಿ ತಾಲೂಕಿನ ಡಂಬಳ ಹೋಬಳಿಯ ಯಕ್ಲಾಸಪುರದಲ್ಲಿ ನಡೆದಿದೆ.

ಡಂಬಳ: ಸಾಲ ಬಾಧೆ ತಾಳಲಾರದೆ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಂಡರಗಿ ತಾಲೂಕಿನ ಡಂಬಳ ಹೋಬಳಿಯ ಯಕ್ಲಾಸಪುರದಲ್ಲಿ ನಡೆದಿದೆ.

ಗ್ರಾಮದ ಈಶಪ್ಪ ಶ್ಯಾನವಾಡ (54) ಆತ್ಮಹತ್ಯೆ ಮಾಡಿಕೊಂಡ ರೈತ.

ಕೆವಿಜಿ ಬ್ಯಾಂಕ್‌ನಲ್ಲಿ ₹ 12 ಲಕ್ಷ ಬೆಳೆ ಸಾಲ ಪಡೆದಿದ್ದ. ಈ ಬಾರಿ ಸತತವಾಗಿ ಸುರಿದ ಮಳೆಗೆ ಹೆಸರು ಬೆಳೆ ಸಂಪೂರ್ಣವಾಗಿ ಹಾಳಾದ ಹಿನ್ನೆಲೆಯಲ್ಲಿ ಮನನೊಂದು ಜಮೀನಿನಲ್ಲಿ ವಿಷ ಸೇವಿಸಿದ್ದಾನೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ರೈತನನ್ನು ತಕ್ಷಣ ಮುಂಡರಗಿ ತಾಲೂಕು ಆಸ್ಪತ್ರೆಗೆ ರವಾನಿಸಿದ ನಂತರ ಗದಗ ಜಿಮ್ಸ್ ಆಸ್ಪತ್ರೆಗೆ ರವಾನಿಸುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾನೆ. ಮುಂಡರಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.