ರಕ್ತವನ್ನು ಉತ್ಪಾದಿಸಲು ಸಾಧ್ಯವಿಲ್ಲ

| Published : Nov 03 2025, 01:30 AM IST

ಸಾರಾಂಶ

ಪ್ರತಿಯೊಬ್ಬರೂ ರಕ್ತದಾನ ಮಾಡುವುದರ ಮೂಲಕ ಇನ್ನೊಬ್ಬರ ಜೀವ ಉಳಿಸುವದರೊಂದಿಗೆ ನಾವು ಆರೋಗ್ಯವಂತರಾಗೋಣ ಎಂದು ಪಿಎಸ್‌ಐ ಪ್ರವೀಣ್‌ ಕರೆ ನೀಡಿದರು.

ಆನಂದಪುರ: ಪ್ರತಿಯೊಬ್ಬರೂ ರಕ್ತದಾನ ಮಾಡುವುದರ ಮೂಲಕ ಇನ್ನೊಬ್ಬರ ಜೀವ ಉಳಿಸುವದರೊಂದಿಗೆ ನಾವು ಆರೋಗ್ಯವಂತರಾಗೋಣ ಎಂದು ಪಿಎಸ್‌ಐ ಪ್ರವೀಣ್‌ ಕರೆ ನೀಡಿದರು.

ಭಾನುವಾರ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ವಿವಿಧ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಆನಂದಪುರ ಪೊಲೀಸ್ ಠಾಣೆಯಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಆಸ್ಪತ್ರೆಗಳೊಂದಿಗೆ ನೇರ ಸಂಪರ್ಕ ಹೊಂದಿರುವ ನಮ್ಮ ಪೊಲೀಸ್ ಇಲಾಖೆ ಯುವ ಜನಾಂಗಕ್ಕೆ ರಕ್ತದಾನದ ಬಗ್ಗೆ ಅರಿವು ಮೂಡಿಸುವಲ್ಲಿ ಮುಂದಾಗಿದೆ ಎಂದು ಅವರು ತಿಳಿಸಿದರು.

ರಕ್ತವನ್ನು ಎಲ್ಲೂ ಉತ್ಪಾದಿಸಲು ಸಾಧ್ಯವಿಲ್ಲ. ಮನುಷ್ಯನ ದೇಹದಲ್ಲಿ ಉತ್ಪಾದನೆ ಆಗುವಂತಹ ರಕ್ತ ಅಮೃತ ವಿದ್ದಂತೆ. ಅನೇಕರು ರಕ್ತದಾನ ಮಾಡುವುದರಿಂದ ಆರೋಗ್ಯ ಸಮಸ್ಯೆಗಳು ಕಾಡುತ್ತವೆ ಎಂದು ತಪ್ಪು ಕಲ್ಪನೆಯನ್ನು ಹೊಂದಿರುತ್ತಾರೆ ಆದರೆ ರಕ್ತದಾನ ಮಾಡುವುದರಿಂದ ಉತ್ತಮ ಆರೋಗ್ಯ ಪಡೆಯಲು ಸಾಧ್ಯ ಎಂದು ಹೇಳಿದರು.

ನಾವು ರಕ್ತದಾನ ಮಾಡುವುದರಿಂದ 4 ಜನರ ಜೀವವನ್ನು ಉಳಿಸಲು ಸಾಧ್ಯ. ಆದ್ದರಿಂದ ಯಾವುದೇ ವ್ಯಕ್ತಿಯು ಪ್ರತಿಫಲಾಪೇಕ್ಷೆಯಿಲ್ಲದೇ ಸ್ವಯಂ ಪ್ರೇರಿತನಾಗಿ ರಕ್ತದಾನ ಮಾಡಬೇಕು ಎಂದು ಕರೆ ನೀಡಿದರು.ಈ ಸಂದರ್ಭದಲ್ಲಿ ಆನಂದಪುರ ಸಹಾಯಕ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್‌ ಸಿದ್ದಾರೂಡ, ದೇವಿದಾಸ್, ವೆಂಕಟೇಶ್ ಮತ್ತು ಹಾಲೇಶಪ್ಪ.ಎಸ್ ಹಾಗೂ ಸಿಬ್ಬಂದಿ ಮತ್ತು ಆರೋಗ್ಯ ಸಿಬ್ಬಂದಿ ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.