ಷೇರುದಾರರ ಹಿತ ಕಾಪಾಡುವ ನಿಟ್ಟಿನಲ್ಲಿ ಪ್ರಾಮಾಣಿಕತೆಯಿಂದ ಎಲ್ಲಾ ನಿರ್ದೇಶಕರ ಸಹಕಾರದೊಂದಿಗೆ ಸೊಸೈಟಿ ಅಭಿವೃದ್ಧಿಗೆ ಉತ್ತಮ ಆಡಳಿತ ನಡೆಸುತ್ತೇನೆ. ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸೊಸೈಟಿಯಲ್ಲಿ ಸಿಗುವ ಗೊಬ್ಬರ, ಸಾಲ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಸಂಘದ ಅಭಿವೃದ್ಧಿಗೆ ಕೆಲಸ ಮಾಡುತ್ತೇನೆ.
ಕನ್ನಡಪ್ರಭ ವಾರ್ತೆ ಮಂಡ್ಯ
ಮಂಡ್ಯ ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಶಂಕರಮಠ ಬೋರೇಗೌಡ ಅವಿರೋಧವಾಗಿ ಆಯ್ಕೆಯಾದರು.೧೨ ಮಂದಿ ನಿರ್ದೇಶಕರಿರುವ ಸಂಘದಲ್ಲಿ ಹಿಂದಿನ ಅಧ್ಯಕ್ಷ ಕೆ.ಸಿ.ರವೀಂದ್ರ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಮಂಗಳವಾರ ಚುನಾವಣೆ ನಡೆಯಿತು. ಚುನಾವಣೆಯಲ್ಲಿ ಬೋರೇಗೌಡ ಹೊರತುಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಚುನಾವಣಾ ಅಧಿಕಾರಿಯಾದ ಸಂಘದ ಸಿಇಒ ಚೇತನ್ ಅವರು ಇವರ ಅವಿರೋಧ ಆಯ್ಕೆಯನ್ನು ಘೋಷಣೆ ಮಾಡಿದರು.
ನೂತನ ಅಧ್ಯಕ್ಷ ಶಂಕರಮಠ ಬೋರೇಗೌಡ ಮಾತನಾಡಿ. ಷೇರುದಾರರ ಹಿತ ಕಾಪಾಡುವ ನಿಟ್ಟಿನಲ್ಲಿ ಪ್ರಾಮಾಣಿಕತೆಯಿಂದ ಎಲ್ಲಾ ನಿರ್ದೇಶಕರ ಸಹಕಾರದೊಂದಿಗೆ ಸೊಸೈಟಿ ಅಭಿವೃದ್ಧಿಗೆ ಉತ್ತಮ ಆಡಳಿತ ನಡೆಸುತ್ತೇನೆ. ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸೊಸೈಟಿಯಲ್ಲಿ ಸಿಗುವ ಗೊಬ್ಬರ, ಸಾಲ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಸಂಘದ ಅಭಿವೃದ್ಧಿಗೆ ಕೆಲಸ ಮಾಡುತ್ತೇನೆ ಎಂದರು.ಉಪಾಧ್ಯಕ್ಷ ಸಿ.ಬಿ.ಕೃಷ್ಣೇಗೌಡ, ನಿರ್ದೇಶಕರಾದ ಹೊಸಹಳ್ಳಿ ಬಿ.ಬೋರೇಗೌಡ, ಎನ್.ನಾಗರಾಜು, ಕೆ.ಎಸ್.ಧರ್ಮೇಂದ್ರ, ಡಿ.ಮೋಹನ್, ಎಂ.ಆರ್.ಸಂದೀಪ್, ರತ್ನಮ್ಮ, ಸುನಂದಮ್ಮ, ಗೌರಮ್ಮ, ಮೇಲ್ವಿಚಾರಕ ಡಿ. ಪುಟ್ಟಸ್ವಾಮಿ ಇತರರು ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.ರಾಜ್ಯ ಮಟ್ಟದ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ
ಕನ್ನಡಪ್ರಭ ವಾರ್ತೆ ಮಂಡ್ಯವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀನಿಶ್ಚಲಾನಂದ ನಾಥ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ಜೈಸ್ ಸಂಸ್ಥೆಯ ಸಹಯೋಗದಲ್ಲಿ ಕೆಂಗೇರಿಯಲ್ಲಿರುವ ಶ್ರೀಮಠದ ಆವರಣ ಮತ್ತು ಚಂದ್ರ ಲೇಔಟ್ ಶಾಖೆಗಳಲ್ಲಿ ಐಎಎಸ್, ಕೆಎಎಸ್, ಗ್ರೂಪ್ -ಸಿ, ಎಫ್‌ಡಿಎ, ಪಿಎಸ್‌ಐ ಮತ್ತು ಎಸ್‌ಡಿಎಯಂತಹ ರಾಜ್ಯ ಮಟ್ಟದ ಪ್ರವೇಶ ಪರೀಕ್ಷೆಗೆ ತರಬೇತಿ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು ೭೨,೧೮೬ ಹುದ್ದೆಗಳನ್ನು ಮುಂದಿನ ೬ ತಿಂಗಳ ಒಳಗೆ ಭರ್ತಿ ಮಾಡಲು ಕಾಲ ನಿಗದಿ ಮಾಡಿರುವುದು ಲಕ್ಷಾಂತರ ಸರ್ಕಾರಿ ಹುದ್ದೆಗಳ ಆಕಾಂಕ್ಷಿಗಳಿಗೆ ಸುವರ್ಣಾವಕಾಶ ಎಂದು ಭಾವಿಸಬಹುದು. ಆ ನಿಟ್ಟಿನಲ್ಲಿ ಶ್ರಮ ವಹಿಸಿ ಅಧ್ಯಯನ ಮಾಡುವ ಅಭ್ಯರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಆರಂಭಿಸಲಾಗುತ್ತಿದೆ. ಈ ತರಬೇತಿಗೆ ಆಯ್ಕೆ ಮಾಡಿಕೊಳ್ಳುವಾಗ ರಾಜ್ಯ ಮಟ್ಟದ ಪ್ರವೇಶ ಪರೀಕ್ಷೆಯನ್ನು ನಡೆಸಿ, ಅಭ್ಯರ್ಥಿಯ ಶೈಕ್ಷಣಿಕ ಮತ್ತು ಆರ್ಥಿಕ ಹಿನ್ನೆಲೆಯ ಮಾಹಿತಿ, ವೈಯಕ್ತಿಕ ಸಂದರ್ಶನ ಹಾಗೂ ಕಠಿಣ ಶ್ರಮ ವಹಿಸುವ ಆಸಕ್ತಿಯುತ ಅಭ್ಯರ್ಥಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗುವುದು.ಅಭ್ಯರ್ಥಿಗಳು ಈ ತರಬೇತಿಗೆ ಅರ್ಜಿ ಸಲ್ಲಿಸಲು ಜು.೧೨ ಕೊನೆಯದಿನವಾಗಿದೆ. ತರಗತಿಗಳು ಆ.೧ರಿಂದ ಆರಂಭಗೊಳ್ಳಲಿವೆ. ಅಭ್ಯರ್ಥಿಗಳುಆನ್‌ಲೈನ್ ನೋಂದಣಿಗಾಗಿ ಡಿಡಿಡಿ.್ಜಜ್ಚಿಛಿಜಿ.್ಚಟಞ ಲಿಂಕ್‌ನ್ನು ಬಳಸಬಹುದು. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ೭೬೭೬೧೬೭೯೦೧/೯೯೮೬೪೩೯೮೭೪ ಸಂಪರ್ಕಿಸಬಹುದು ಎಂದು ಶ್ರೀನಿಶ್ಚಲಾನಂದನಾಥ ಸ್ವಾಮೀಜಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.