Unauthorized absence from duty: notice to attend

ಮಸ್ಕಿ: ತಾಲೂಕಿನ ಹಾಲಾಪುರ ಸರ್ಕಾರಿ ಪ್ರೌಢ ಶಾಲೆಯ ದ್ವಿತೀಯ ದರ್ಜೆ ಸಹಾಯಕ ವೀರೇಶ ಕಳೆದ 2020 ಡಿ.7 ರಿಂದ ಕರ್ತವ್ಯಕ್ಕೆ ಅನಧಿಕೃತವಾಗಿ ಗೈರು ಹಾಜರಾಗಿದ್ದು, ಕೂಡಲೇ ಕರ್ತವ್ಯಕ್ಕೆ ಹಾಜರಾಗುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಸೂಚಿಸಿದ್ದಾರೆ. ಈಗಾಗಲೇ ಕಾರಣ ಕೇಳುವ ನೋಟಿಸ್ ಜಾರಿ ಮಾಡಿ ಕರ್ತವ್ಯಕ್ಕೆ ಹಾಜರಾಗಲು ಸೂಚಿಸಿದ್ದಾಗಿಯೂ ಇಂದಿನವರೆಗೆ ಯಾವುದೇ ಸ್ಪಂದನೆ ನೀಡಿಲ್ಲ. ಮತ್ತು ಕಳೆದ ಅ.10 ರಂದು ಖುದ್ದಾಗಿ ಮನೆಗೆ ಭೇಟಿ ನೀಡಿ ಲಿಖಿತ ಆದೇಶ ನೀಡಿದ್ದಾಗಿಯೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಪ್ರಯುಕ್ತ ಅಂತಿಮವಾಗಿ ಈ ಮೂಲಕ ನೌಕರರ ಗಮನ ಸೆಳೆಯುತ್ತಾ ಕೂಡಲೇ ತಾವು ಕರ್ತವ್ಯಕ್ಕೆ ಹಾಜರಾಗಲು ಮತ್ತೊಮ್ಮೆ ಸೂಚಿಸಲಾಗಿದೆ. ಒಂದು ವೇಳೆ ತಾವು ಈ ಪ್ರಕಟಣೆಗೆ ಪ್ರತಿಕ್ರಿಯಿಸದಿದ್ದಲ್ಲಿ ಕರ್ನಾಟಕ ನಾಗರಿಕ ಸೇವಾ ನಿಯಮಗಳ ನಿಯಮ 108(ಎ)ರ ಪ್ರಕಾರ ಶಿಸ್ತು ಕ್ರಮ ಜರುಗಿಸಿ ಸೇವೆಯಿಂದ ವಜಾಗೊಳಿಸಲಾಗುವುದು ಎಂದು ಬಿಇಒ ಅವರು ತಿಳಿಸಿದ್ದಾರೆ.